ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Priyanka Upendra: ಬಾಲಿವುಡ್‌ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ; ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಆ್ಯಕ್ಷನ್‌ ಕಟ್‌

ಬಹುಭಾಷಾ ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಇದೀಗ ಮತ್ತೊಮ್ಮೆ ಬಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಹೌದು, 22 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್‌ 21ʼ ಹೆಸರಿನ ಬಾಲಿವುಡ್‌ ಸಿನಿಮಾ ನಿರ್ದೇಶಿಸುತ್ತಿದ್ದು, ನಾಯಕಿಯಾಗಿ ಪ್ರಿಯಾಂಕಾ ಆಯ್ಕೆಯಾಗಿದ್ದಾರೆ. ಬೆಂಗಳೂರು ಮೂಲದ ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ ನಡುವಿನ ಕಥೆಯನ್ನು ಈ ಸಿನಿಮಾ ಹೊಂದಿದೆ. ಬಹುತಾರಾಗಣದ ಈ ಸಿನಿಮಾದಲ್ಲಿ ಕನ್ನಡದ ನಟಿ ಪ್ರಿಯಾಂಕಾ ಉಪೇಂದ್ರ ಕೇರ್‌ ಟೇಕರ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಬಾಲಿವುಡ್‌ನ ಪ್ರವೀಣ್ ಸಿಂಗ್ ಸಿಸೋಡಿಯಾ, ಜರೀನಾ ವಹಾಬ್ ಮತ್ತು ಅಮಿತ್ ಬೆಹ್ಲ್ ಸಹ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ.

ಬಾಲಿವುಡ್‌ಗೆ ಮತ್ತೊಮ್ಮೆ ಕಾಲಿಟ್ಟ ಪ್ರಿಯಾಂಕಾ ಉಪೇಂದ್ರ

ಪ್ರಿಯಾಂಕಾ ಉಪೇಂದ್ರ.

Profile Ramesh B May 5, 2025 2:48 PM