RCB vs PBKS: ಆರ್ಸಿಬಿ-ಪಂಜಾಬ್ ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ ಹೇಗಿದೆ?
ಈಗಾಗಲೇ ತವರಿನಲ್ಲಿ ಆಡಿದ ಎರಡು ಪಂದ್ಯಗಳನ್ನು ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ತವರಿನ ಪಂದ್ಯಕ್ಕೆ ಸಜ್ಜಾಗಿದೆ. ಶುಕ್ರವಾರ ಚಿನ್ನಸ್ವಾಮಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಉಭಯ ತಂಡಗಳು 6 ಪಂದ್ಯಗಳಲ್ಲಿ ತಲಾ 4 ಗೆಲುವು ಸಾಧಿಸಿ 8 ಅಂಕ ಹೊಂದಿದೆ. ಆದರೆ ರನ್ರೇಟ್ ಆಧಾರದಲ್ಲಿ ಮುಂದಿರುವ ಆರ್ಸಿಬಿ ಮೂರನೇ ಸ್ಥಾನದಲ್ಲಿದ್ದರೆ, ಪಂಜಾಬ್ ನಾಲ್ಕನೇ ಸ್ಥಾನದಲ್ಲಿದೆ.



ಬ್ಯಾಟಿಂಗ್ ಸ್ನೇಹಿ ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವುದರಿಂದ ಭಾರೀ ಪ್ರಮಾಣದ ರನ್ ಹರಿದು ಬರುವುದು ಸಾಮಾನ್ಯ. ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ದೊಡ್ಡ ಮೊತ್ತ ಪೇರಿಸುವ ಸವಾಲು ಎದುರಾಗಲಿದೆ. ಜತೆಗೆ ಬೌಲರ್ಗಳಿಗೆ ನಿಜವಾದ ಸತ್ವಪರೀಕ್ಷೆ ಎದುರಾಗಲಿದೆ. ವೇಗಿಗಳಿಗಿಂತ ಸ್ಪಿನ್ನರ್ಗಳು ಕೊಂಚ ಹಿಡಿತ ಸಾಧಿಸಬಹುದು. ಈ ಆವೃತ್ತಿಯಲ್ಲಿ ನಡೆದ ಎರಡು ಪಂದ್ಯಗಳಲ್ಲಿಯೂ ಚೇಸಿಂಗ್ ನಡೆಸಿದ ತಂಡವೇ ಗೆದ್ದು ಬೀಗಿತ್ತು. ಹೀಗಾಗಿ ಟಾಸ್ ಕೂಡ ನಿರ್ಣಾಯಕ.

ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಇದುವರೆಗಿನ ಐಪಿಎಲ್ ಇತಿಹಾಸದಲ್ಲಿ ಒಟ್ಟು 33 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್ 17 ಪಂದ್ಯ ಗೆದ್ದಿದ್ದರೆ, ಆರ್ಸಿಬಿ 16 ಪಂದ್ಯಗಳಲ್ಲಿ ಜಯಿಸಿದೆ. ಕಳೆದ ಎರಡು ವರ್ಷಗಳಿಂದ ಪಂಜಾಬ್ ಆರ್ಸಿಬಿ ವಿರುದ್ಧ ಪಂದ್ಯ ಗೆದ್ದಿಲ್ಲ. 2022ರಲ್ಲಿ ಕೊನೆಯ ಬಾರಿಗೆ ಗೆಲುವು ಸಾಧಿಸಿತ್ತು.

ಮುಂದಿನ 5 ದಿನಗಳ ಕಾಲ ಬೆಂಗಳೂರು, ಮೈಸೂರು, ಕೊಡಗು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಭೀತಿ ತಪ್ಪಿದ್ದಲ್ಲ. ಪಂದ್ಯ ನಡೆಯುವ ಸಮಯದಲ್ಲಿ ಎಷ್ಟೇ ಜೋರಾಗಿ ಮಳೆ ಬಂದರೂ ಮಳೆ ನಿಂತ 15 ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸಬ್ ಏರ್ ಸಿಸ್ಟಂ ತಂತ್ರಜ್ಞಾನ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ.

ಆರ್ಸಿಬಿ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಅನುಮಾನ. ಕಳೆದ ಪಂದ್ಯದಲ್ಲಿ ಆಡಿದ ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಕೋಲ್ಕತಾ ವಿರುದ್ಧ 111 ರನ್ಗಳನ್ನು ರಕ್ಷಿಸಿ ದಾಖಲೆಯ ಗೆಲುವು ಸಾಧಿಸಿದ ಪಂಜಾಬ್ ಕೂಡ ಆಡುವ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಪ್ರಿಯಾಂಶ್ ಆರ್ಯ, ಪ್ರಭ್ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ಸಿ), ನೆಹಾಲ್ ವಧೇರಾ, ಜೋಶ್ ಇಂಗ್ಲಿಸ್ (ವಿ. ಕೀ), ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷ್ದೀಪ್ ಸಿಂಗ್, ಯಜುವೇಂದ್ರ ಚಾಹಲ್, ಸೂರ್ಯಾಂಶ್ ಶೆಡ್ಜ್ ಆಡಬಹುದು.