ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿರಾಟ್‌ ಕೊಹ್ಲಿ ಬಳಿಕ ಐಪಿಎಲ್‌ ಟೂರ್ನಿಯಲ್ಲಿ ವಿಶೇಷ ದಾಖಲೆ ಬರೆದ ರೋಹಿತ್‌ ಶರ್ಮಾ!

Rohit sharma Scored 7000 Runs: ಗುಜರಾತ್‌ ಟೈಟನ್ಸ್‌ ವಿರುದ್ದದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮಾಜಿ ನಾಯಕ ರೋಹಿತ್‌ ಶರ್ಮಾ 50 ಎಸೆತಗಳಲ್ಲಿ 81 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಐಪಿಎಲ್‌ ಟೂರ್ನಿಯಲ್ಲಿ 7000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ವಿರಾಟ್‌ ಕೊಹ್ಲಿ ಬಳಿಕ ಈ ದಾಖಲೆ ಬರೆದ ಎರಡನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

1/6

ಎಲಿಮಿನೇಟರ್‌ ಪಂದ್ಯ

ಮುಲ್ಲನ್‌ಪುರದ ಮಹಾರಾಜ ಯದವೀಂದ್ರ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಕಾದಾಟ ನಡೆಸಿದ್ದವು.

2/6

228 ರನ್‌ ಕಲೆ ಹಾಕಿದ್ದ ಮುಂಬೈ ಇಂಡಿಯನ್ಸ್‌

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಮುಂಬೈ ಇಂಡಿಯನ್ಸ್‌ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 228 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಗುಜರಾತ್‌ ಟೈಟನ್ಸ್‌ಗೆ 229 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.

3/6

50 ಎಸೆತಗಳಲ್ಲಿ 87 ರನ್‌ ಸಿಡಿಸಿದ ರೋಹಿತ್‌ ಶರ್ಮಾ

ಮುಂಬೈ ಇಂಡಿಯನ್ಸ್‌ ಪರ ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದರು. ಅವರು ಆಡಿದ 50 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 9 ಬೌಂಡರಿಗಳೊಂದಿಗೆ 87 ರನ್‌ಗಳನ್ನು ಸಿಡಿಸಿದರು. ಇದರ ಜೊತೆಗೆ ಜಾನಿ ಬೈರ್‌ಸ್ಟೋವ್‌ ಅವರ ಜೊತೆ ಮೊದಲನೇ ವಿಕೆಟ್‌ಗೆ 84 ರನ್‌ಗಳ ಜೊತೆಯಾಟವನ್ನು ಆಡಿದರು.

4/6

ವೇಗವಾಗಿ 7000 ರನ್‌ ಪೂರ್ಣಗೊಳಿಸಿದ ಹಿಟ್‌ಮ್ಯಾನ್‌

ಗುಜರಾತ್‌ ಟೈಟನ್ಸ್‌ ವಿರುದ್ಧದ ತಮ್ಮ ಅದ್ಭುತ ಇನಿಂಗ್ಸ್‌ನ ಮೂಲಕ ರೋಹಿತ್‌ ಶರ್ಮಾ ಐಪಿಎಲ್‌ ಟೂರ್ನಿಯಲ್ಲಿ 7000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

5/6

ಎರಡನೇ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವೇಗವಾಗಿ 7000 ರನ್‌ ಗಳಿಸಿದ ಎರಡನೇ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಇವರು ಈ ಸಾಧನೆಯನ್ನು ಮಾಡಲು 5403 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ರೋಹಿತ್‌ ಶರ್ಮಾ 5,303 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

6/6

300ನೇ ಐಪಿಎಲ್‌ ಸಿಕ್ಸ್‌ ಬಾರಿಸಿದ ರೋಹಿತ್‌

ಈ ಪಂದ್ಯದಲ್ಲಿ ಅವರು 300ನೇ ಐಪಿಎಲ್‌ ಸಿಕ್ಸರ್‌ ಅನ್ನು ಕೂಡ ಪೂರ್ಣಗೊಳಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲನೇ ಹಾಗೂ ಒಟ್ಟಾರೆ ಎರಡನೇ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಅವರು ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್‌ಗಳನ್ನು ಬಾರಿಸಿದ್ದರು.