ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಇನ್‌ಸ್ಟಾಗ್ರಾಮ್‌ನಲ್ಲಿಯೂ ಎಲ್ಲಾ ತಂಡಗಳನ್ನು ಹಿಂದಿಕ್ಕಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದೆ. ಆಡಿದ 13 ಪಂದ್ಯಗಳಿಂದ 17 ಅಂಕಗಳನ್ನು ಕಲೆ ಹಾಕುವ ಮೂಲಕ ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿದೆ. ಆದರೂ ಅಂಕಪಟ್ಟಿಯಲ್ಲಿ ಅಗ್ರ ಎರಡರ ಸ್ಥಾನಗಳ ಮೇಲೆ ಕಣ್ಣಿಟ್ಟಿದೆ. ಇದೀಗ ಆರ್‌ಸಿಬಿ ತಂಡ ಸೋಶಿಯಲ್‌ ಮೀಡಿಯಾದಲ್ಲಿ ನೂತನ ದಾಖಲೆಯನ್ನು ಬರೆದಿದೆ.

1/6

ಇನ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚು ಫಾಲೋವರ್ಸ್‌ ಹೊಂದಿರುವ ಅಗ್ರ 5 ತಂಡಗಳು

ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಿವೆ. ಆದರೆ, ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಆರ್‌ಸಿಬಿ ತಂಡ ಹೊಂದಿದೆ. ಕರ್ನಾಟಕ ಮಾತ್ರವಲ್ಲದೆ ಇಡೀ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್‌ ಅನ್ನು ಹೊಂದಿರುವ ಅಗ್ರ ಐದು ತಂಡಗಳನ್ನು ಇಲ್ಲಿ ವಿವರಿಸಲಾಗಿದೆ.

2/6

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಫಾಲೋವರ್ಸ್‌ ಹೊಂದಿರುವ ತಂಡಗಳ ಸಾಲಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಅಗ್ರ ಸ್ಥಾನದಲ್ಲಿದೆ. ಆರ್‌ಸಿಬಿ 20 ದಶಲಕ್ಷ ಪಾಲೋವರ್ಸ್‌ ಅನ್ನು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹೊಂದಿದೆ.

3/6

ಚೆನ್ನೈ ಸೂಪರ್‌ ಕಿಂಗ್ಸ್‌

ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ 18.6 ದಶಲಕ್ಷ ಫಾಲೋವರ್ಸ್‌ ಅನ್ನು ಹೊಂದಿದೆ. ಆ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಎರಡನೇ ಗರಿಷ್ಠ ಫಾಲೋವರ್ಸ್‌ ಹೊಂದಿದೆ.

4/6

ಮುಂಬೈ ಇಂಡಿಯನ್ಸ್‌

ಐದು ಬಾರಿ ಐಪಿಎಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿದ್ದರೂ ಮುಂಬೈ ಇಂಡಿಯನ್ಸ್‌ ತಂಡ ಇನ್‌ಸ್ಟಾಗ್ರಾಮ್‌ನಲ್ಲಿ ಇನ್ನೂ ಕಪ್‌ ಗೆದ್ದಿಲ್ಲದ ಆರ್‌ಸಿಬಿಗಿಂತ ಕಡಿಮೆ ಹಿಂಬಾಲಕರನ್ನು ಹೊಂದಿದೆ. ಮುಂಬೈ ಇನ್‌ಸ್ಟಾಗ್ರಾಮ್‌ನಲ್ಲಿ 18 ಮಿಲಿಯನ್‌ ಪಾಲೋವರ್ಸ್‌ ಅನ್ನು ಹೊಂದಿದೆ.

5/6

ಕೋಲ್ಕತಾ ನೈಟ್‌ ರೈಡರ್ಸ್‌

ಕೋಲ್ಕತಾ ನೈಟ್‌ ರೈಡರ್ಸ್‌ ತಂಡ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ 7.5 ಮಿಲಿಯನ್‌ ಫಾಲೋವರ್ಸ್‌ ಅನ್ನು ಹೊಂದಿದೆ. ಆ ಮೂಲಕ ಈ ಸಾಲಿನ ತಂಡಗಳಲ್ಲಿ ನಾಲ್ಕನೇ ಸ್ಥಾನವನ್ನು ಹೊಂದಿದೆ.

6/6

ಸನ್‌ರೈಸರ್ಸ್‌ ಹೈದರಾಬಾದ್‌

ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಸನ್‌ರೈಸರ್ಸ್‌ಹೈದರಾಬಾದ್‌ ತಂಡ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪ್ಲೇಆಫ್ಸ್‌ನಿಂದ ಹೊರ ಬಿದ್ದಿದೆ. ಆದರೆ, ಈ ತಂಡ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ 5.4 ದಶಲಕ್ಷ ಫಾಲೋವರ್ಸ್‌ ಅನ್ನು ಹೊಂದಿದೆ.