ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Most Anticipated Movies 2026: ಮುಂದಿನ ವರ್ಷ ಕನ್ನಡಿಗರನ್ನು ರಂಜಿಸಲು ಬರುತ್ತಿರುವ ಬಹುನಿರೀಕ್ಷಿತ ಸಿನಿಮಾಗಳ ಲಿಸ್ಟ್‌ ಇಲ್ಲಿದೆ ನೋಡಿ

Sandalwood: 2025ರ ಮುಕ್ತಾಯವಾಗುತ್ತಿದ್ದು, 2026ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಂದಹಾಗೆ, 2026 ಸ್ಯಾಂಡಲ್‌ವುಡ್‌ ಪಾಲಿಗೆ ಹೇಗಿರಲಿದೆ? ಯಾವೆಲ್ಲಾ ದೊಡ್ಡ ಸಿನಿಮಾಗಳು, ಬಹುನಿರೀಕ್ಷಿತ ಸಿನಿಮಾಗಳು ಈ ವರ್ಷ ರಿಲೀಸ್‌ ಆಗಲಿವೆ? ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

1/9

ಟಾಕ್ಸಿಕ್ (Toxic)

ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಈಗಾಗಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಕುತೂಹಲ ಮೂಡಿಸಿದೆ. 'ಟಾಕ್ಸಿಕ್' ಮಾರ್ಚ್ 19ರಂದು ತೆರೆಕಾಣಲಿದೆ.

2/9

666 ಆಪರೇಷನ್ ಡ್ರೀಮ್ ಥಿಯೇಟರ್

ಶಿವರಾಜ್‌ಕುಮಾರ್‌ ಮತ್ತು ಡಾಲಿ ಧನಂಜಯ್ ನಟನೆಯ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾಕ್ಕೆ ಹೇಮಂತ್‌ ಎಂ ರಾವ್‌ ನಿರ್ದೇಶನ ಮಾಡುತ್ತಿದ್ದಾರೆ. 2026ರಲ್ಲಿ ತೆರೆಗೆ ಬರಲಿದೆ.

3/9

ಕೆಡಿ (KD - The Devil)

ಜೋಗಿ ಪ್ರೇಮ್ ನಿರ್ದೇಶನದ ಈ ಚಿತ್ರದಲ್ಲಿ ಧ್ರುವ ಸರ್ಜಾ ಮುಖ್ಯ ಭೂಮಿಕೆಯಲ್ಲಿದ್ದಾರೆ. 1970ರ ದಶಕದ ಬೆಂಗಳೂರಿನ ಭೂಗತ ಲೋಕದ ನೈಜ ಘಟನೆಗಳ ಆಧಾರಿತ ಕಥೆ ಇದಾಗಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

4/9

ಲ್ಯಾಂಡ್‌ಲಾರ್ಡ್‌ (Landlord)

ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಸಿನಿಮಾವನ್ನು ಜಡೇಶ್‌ ಕೆ ಹಂಪಿ ನಿರ್ದೇಶಿಸಿದ್ದಾರೆ. ದೊಡ್ಡಮಟ್ಟದ ನಿರೀಕ್ಷೆಯನ್ನು ಈ ಸಿನಿಮಾ ಹುಟ್ಟುಹಾಕಿದೆ.

5/9

ಕರಾವಳಿ (Karavali)

ಪ್ರಜ್ವಲ್‌ ದೇವರಾಜ್‌ ನಟನೆಯ ಚಿತ್ರವಿದು. ಕರಾವಳಿ ಭಾಗದ ಸಂಸ್ಕೃತಿ, ಆಚರಣೆ ಮತ್ತು ಅಲ್ಲಿನ ಮಣ್ಣಿನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ ಎಂದು ಹೇಳಲಾಗುತ್ತಿದೆ. ಗುರುದತ್‌ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ.

6/9

ಬಿಲ್ಲಾ ರಂಗ ಬಾಷಾ (Billa Ranga Baasha)

ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್‌ನ ಬಹುಕೋಟಿ ವೆಚ್ಚದ ಸಿನಿಮಾ ಇದಾಗಿದೆ. ಸುದೀಪ್ ಅವರ ವೃತ್ತಿಜೀವನದ ಅತಿದೊಡ್ಡ ಚಿತ್ರಗಳಲ್ಲಿ ಒಂದೆಂದು ಹೇಳಲಾಗುತ್ತಿದೆ.

7/9

ಭಾರ್ಗವ (Bhargava)

ಇದು ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಅವರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ. ಫ್ಯಾಮಿಲಿ ಡ್ರಾಮಾ ಇರುವ ಈ ಸಿನಿಮಾಗೆ ಸೂರಪ್ಪ ಬಾಬು ಹಣ ಹಾಕಿದ್ದಾರೆ.

8/9

ಯುವರ್ಸ್ ಸಿನ್ಸಿಯರ್ಲಿ ರಾಮ್ (Yours Sincerely Ram)

ಗೋಲ್ಡನ್‌ ಸ್ಟಾರ್‌ ಗಣೇಶ್ ಮತ್ತು ರಮೇಶ್‌ ಅರವಿಂದ್‌ ಒಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೊಂದು ರೊಮ್ಯಾಂಟಿಕ್ ಕಾಮಿಡಿ ಅಥವಾ ಎಮೋಷನಲ್ ಡ್ರಾಮಾ ಆಗಿರಲಿದ್ದು, ವಿಖ್ಯಾತ್‌ ನಿರ್ದೇಶನ ಮಾಡುತ್ತಿದ್ದಾರೆ.

9/9

ಡ್ಯಾಡ್ (Dad) - ಹ್ಯಾಟ್ರಿಕ್ ಹೀರೋ ಶಿವಣ್ಣ

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅಭಿನಯದ ಭಾವನಾತ್ಮಕ ಆಕ್ಷನ್ ಡ್ರಾಮಾ ಸಿನಿಮಾ. ತಂದೆ ಮತ್ತು ಮಗಳ ನಡುವಿನ ಗಾಢವಾದ ಪ್ರೀತಿ ಹಾಗೂ ಅವರಿಬ್ಬರ ನಡುವಿನ ಸಂಬಂಧದ ಸುತ್ತ ನಡೆಯುವ ಈ ಸಿನಿಮಾದ ಬಹುತೇಕ ಶೂಟಿಂಗ್‌ ಮುಕ್ತಾಯವಾಗಿದೆ.