RCB vs PBKS: ಶಿಖರ್ ಧವನ್ರ ಐಪಿಎಲ್ ಬೌಂಡರಿ ದಾಖಲೆ ಮುರಿದ ವಿರಾಟ್ ಕೊಹ್ಲಿ!
Virat Kohli breaks Shikhar Dhawan's Record: ಪಂಜಾಬ್ ಕಿಂಗ್ಸ್ ವಿರುದ್ಧದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಸಿಡಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಶಿಖರ್ ಧವನ್ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.



ಬೆಂಗಳೂರು vs ಪಂಜಾಬ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ನಲ್ಲಿ ಕದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಆರ್ಸಿಬಿ ಮೊದಲು ಬ್ಯಾಟ್ ಮಾಡುವಂತಾಗಿತ್ತು.

43 ರನ್ಗೆ ಕೊಹ್ಲಿ ಔಟ್
ವಿರಾಟ್ ಕೊಹ್ಲಿ ಅವರು 35 ಎಸೆತಗಳಲ್ಲಿ ಮೂರು ಬೌಂಡರಿಗಳೊಂದಿಗೆ 43 ರನ್ ಗಳಿಸಿದ್ದರು. ಆ ಮೂಲಕ ಅರ್ಧಶತಕದಂಚಿನಲ್ಲಿದ್ದರು. ಆದರೆ, ಅಝಮತ್ವುಲ್ಲಾ ಒಮರ್ಜಾಯ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಕ್ಯಾಚ್ ಕೊಟ್ಟರು.

ಶಿಖರ್ ಧವನ್ ದಾಖಲೆ ಮುರಿದ ಕೊಹ್ಲಿ
ಪಂಜಾಬ್ ಕಿಂಗ್ಸ್ ವಿರುದ್ಧ ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಆರ್ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಆ ಮೂಲಕ ಮಾಜಿ ಆರಂಭಿಕ ಶಿಖರ್ ಧವನ್ರ ದಾಖಲೆಯನ್ನು ಮುರಿದಿದ್ದಾರೆ.

770* ಬೌಂಡರಿ ಗಳಿಸಿರುವ ಕೊಹ್ಲಿ
ಪಂಜಾಬ್ ಕಿಂಗ್ಸ್ ವಿರುದ್ದದ ತಮ್ಮ ಇನಿಂಗ್ಸ್ನಲ್ಲಿ 13 ಓವರ್ಗಳ ಮುಗಿಯುವ ಹೊತ್ತಿಗೆ ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿದ್ದರು. ಈ ಮೂರು ಬೌಂಡರಿಗಳ ಮೂಲಕ ಕೊಹ್ಲಿ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 770 ಬೌಂಡರಿಗಳನ್ನು ಬಾರಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಧವನ್
ಪಂಜಾಬ್ ಕಿಂಗ್ಸ್ ತಂಡದ ಮಾಜಿ ನಾಯಕ ಶಿಖರ್ ಧವನ್ ಐಪಿಎಲ್ ವೃತ್ತಿ ಜೀವನಕ್ಕೆ ವಿದಾಯ ಹೇಳುವುದಕ್ಕೂ ಮುನ್ನ 222 ಪಂದ್ಯಗಳಿಂದ 768 ಬೌಂಡರಿಗಳನ್ನು ಬಾರಿಸಿದ್ದಾರೆ. ಆ ಮೂಲಕ ಈ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಅಗ್ರ ಐವರು ಬ್ಯಾಟರ್ಗಳು
ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಗಳಿಸಿದ ಅಗ್ರ ಐವರು ಬ್ಯಾಟ್ಸ್ಮನ್ಗಳ ಸಾಲಿನಲ್ಲಿ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಅವರ ಬಳಿಕ ಕ್ರಮವಾಗಿ ಮೂರು ಸ್ಥಾನಗಳಲ್ಲಿ ಡೇವಿಡ್ ವಾರ್ನರ್ (663), ರೋಹಿತ್ ಶರ್ಮಾ (640) ಹಾಗೂ ಅಜಿಂಕ್ಯ ರಹಾನೆ (514) ಅವರು ಇದ್ದಾರೆ.