Sunday, 29th November 2020

ಬಿಹಾರ ವಿಧಾನಸಭಾ ಚುನಾವಣೆ: ಪ್ರಚಾರ ಕಣಕ್ಕೆ ಧುಮುಕಿದ ಪ್ರಧಾನಿ ಮೋದಿ, ರಾಗಾ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಇಂದಿನಿಂದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ. ಈ ಇಬ್ಬರೂ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ 12 ಪ್ರಚಾರ ಸಭೆಗಳಲ್ಲಿ ಭಾಗಿಯಾಗಲಿದ್ದು, ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು. ಸಸಾರಾಮ್​, ಮಧ್ಯಾಹ್ನ ಭಾಗಲ್​ಪುರ್ ಹಾಗೂ ಗಯಾದಲ್ಲಿ ರ‍್ಯಾಲಿ ನಡೆಸಲಿದ್ದಾರೆ.

ನವಾಡಾದ ಹಿಸುವಾ ಮತ್ತು ಭಾಗಲ್‌ಪುರ ಜಿಲ್ಲೆಯ ಕಹಲ್‌ಗಾಂವ್‌ನಲ್ಲಿ ರಾಹುಲ್‌ ಕಾಂಗ್ರೆಸ್‌ ಮತ್ತು ಆರ್‌ಜೆಡಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

Leave a Reply

Your email address will not be published. Required fields are marked *