Wednesday, 28th July 2021

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಸಂತಾಪ ಸೂಚಿಸಿದ ಮೋದಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಿಂದ ಮೃತಪಟ್ಟವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬ ಗಳ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಟಾಟಾ ಏಸ್ ಚಾಲಕ ರಿಯಾಜ್ ಒಬ್ಬರನ್ನು ಹೊರತುಪಡಿಸಿದ ಉಳಿದವರು ಅರಣ್ಯದೊಳಗೆ ಇಟ್ಟಿದ್ದ ಜಿಲೆಟಿನ್ ಹೊತ್ತು ತೆರಳಿದ್ದರು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಟಾಟಾ ಏಸ್ ವಾಹನದಲ್ಲಿ ಕುಳಿತಿದ್ದ ಚಾಲಕ ರಿಯಾಜ್ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಿಯಾಜ್ ಎಂಬುವವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *