ಕುಮಾರಸ್ವಾಮಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ: ಡಿಕೆಶಿ
DK Shivakumar: ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ʼಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ ಎಂದು ತಿರುಗೇಟು ನೀಡಿದ್ದಾರೆ.