ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ
Dadasaheb Phalke Award 2024: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಗೌರವಾನ್ವಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.