ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Reservation:‌ ಗುಡ್‌ನ್ಯೂಸ್‌; ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಶೇ.7.5ರಷ್ಟು ಮೀಸಲಾತಿ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಪ್ರಜಾಸೇವೆ ಅಭಿಯಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಚಾಲನೆ ನೀಡಿ, ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಸದ್ಯ ಗ್ರಾಮೀಣ ಹಾಗೂ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ಇದೀಗ ಸರ್ಕಾರಿ ಶಾಲೆಯಲ್ಲಿ ಓದಿದ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ವಿಜಯನಗರ: ಬಡ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಶಕ್ತಿ ತುಂಬಲು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5ರಷ್ಟು ಆಂತರಿಕ ಮೀಸಲಾತಿ (Karnataka Reservation) ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಇದರ ಬಗ್ಗೆ ಪ್ರಕಟಿಸಲಾಗುವುದು ಸಿಎಂ ಡಿ.ಕೆ. ಶಿವಕುಮಾರ್​ ಘೋಷಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಪ್ರಜಾಸೇವೆ ಅಭಿಯಾನಕ್ಕೆ ಸಿಎಂ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ಹಳ್ಳಿಗಳಲ್ಲಿ ವ್ಯಾಸಂಗ ಮಾಡುವ ಸರ್ಕಾರಿ ಶಾಲೆ ಮಕ್ಕಳಿಗೆ 7.5% ಮೀಸಲಾತಿ ನೀಡಲು ನಮ್ಮ ಸರ್ಕಾರ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು" ಎಂದು ತಿಳಿಸಿದ್ದಾರೆ.

ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ

"ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

"ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಇನ್ನುಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ Tr. ಎಂದು ಬಿರುದು ಹಾಕಿಕೊಳ್ಳಬಹುದು. ರಾಜ್ಯದಲ್ಲಿ 4.50 ಲಕ್ಷ ಶಿಕ್ಷಕರಿದ್ದಾರೆ. ನಮ್ಮ ಸಮಾಜದಲ್ಲಿ ಇಬ್ಬರು ದೇವರನ್ನು ಕಾಣುತ್ತೇವೆ. ಮೊದಲನೆಯದು ಜನ್ಮ ನೀಡಿದ ತಂದೆ ತಾಯಿ, ಎರಡನೆಯದು ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು. ಅಕ್ಷರ ಸೇವೆ ಪರಮಾತ್ಮನ ಸೇವೆ. ಹೀಗಾಗಿ ಅವರಿಗೆ ಬಿರುದು ನೀಡಲು ತೀರ್ಮಾನಿಸಿದ್ದೇವೆ" ಎಂದು ಹೇಳಿದರು.

Praja Seva Department: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಪ್ರಜಾಸೇವಾ ಇಲಾಖೆʼ ಹೇಗೆ ಕಾರ್ಯ ನಿರ್ವಹಿಸುತ್ತದೆ?; ಯಾವೆಲ್ಲಾ ಸಮಸ್ಯೆಗಳಿಗೆ ಅರ್ಜಿ ಸಲ್ಲಿಸಬಹುದು?

"ಯಾವುದೇ ಸ್ವಾರ್ಥ ಇಲ್ಲದೆ ಸಮಾಜವನ್ನು ತಿದ್ದಿ ಮಾರ್ಗದರ್ಶನ ನೀಡುವ ವೃತ್ತಿ ಶಿಕ್ಷಕ ವೃತ್ತಿ. ದೇಶಕ್ಕೆ ಸೈನಿಕ, ಕಾರ್ಮಿಕ, ಶಿಕ್ಷಕ, ಕೃಷಿಕ ಆಧಾರ ಸ್ತಂಭಗಳು. ಅವರಿಗೆ ನಾವು ಗೌರವ ನೀಡಬೇಕು. ಇದು ನಮ್ಮ ಸರ್ಕಾರದ ಜವಾಬ್ದಾರಿ" ಎಂದರು.