ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bihar Election 2025: ಬಿಹಾರದಲ್ಲಿ ಗೆಲುವಿನ ಮರುದಿನವೇ ಬಿಜೆಪಿಯಿಂದ ಮೂವರು ಅಮಾನತು

ಬಿಹಾರದಲ್ಲಿ ಬಿಜೆಪಿ ಗೆಲುವಿನ ಸಂಭ್ರಮದ ನಡುವೆಯೇ ಮೂವರನ್ನು ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್, ಎಂಎಲ್‌ಸಿ ಅಶೋಕ್ ಅಗರ್ವಾಲ್ ಮತ್ತು ಕಟಿಹಾರ್ ಮೇಯರ್ ಉಷಾ ಅಗರ್ವಾಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಕುರಿತು ಪತ್ರ ಬರೆದಿರುವ ಬಿಜೆಪಿ ಇವರಿಬ್ಬರ ಚಟುವಟಿಕೆಗಳು ಪಕ್ಷಕ್ಕೆ ವಿರುದ್ಧವಾಗಿದ್ದು ಅಶಿಸ್ತು ಎಂದು ಪರಿಗಣಿಸಿರುವುದಾಗಿ ಹೇಳಿದೆ.

ಆರ್.ಕೆ. ಸಿಂಗ್ ಮತ್ತು ಅಶೋಕ್ ಕುಮಾರ್ ಅಗರ್ವಾಲ್ (ಸಂಗ್ರಹ ಚಿತ್ರ)

ಬಿಹಾರ: ಗೆಲುವಿನ ಸಂಭ್ರಮದಲ್ಲಿ ಕಾರ್ಯಕರ್ತರಿಗೆ ಬಿಜೆಪಿ (BJP) ಬಹುದೊಡ್ಡ ಆಘಾತ ನೀಡಿದೆ. ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ (Bihar Election 2025) ಭರ್ಜರಿಯಾಗಿ ಜಯಭೇರಿ ಬಾರಿಸಿರುವ ಬಿಜೆಪಿ ತನ್ನ ಪಕ್ಷದಿಂದ ಇಬ್ಬರನ್ನು ಅಮಾನತು ಮಾಡಿದೆ. ಬಿಹಾರದಲ್ಲಿ ಬಹುದೊಡ್ಡ ಗೆಲುವಿನ ಮರುದಿನವೇ ಅರಾಹ್‌ನ ಬಿಜೆಪಿ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ (R.K. Sing), ಎಂಎಲ್‌ಸಿ ಅಶೋಕ್ ಅಗರ್ವಾಲ್ (Ashok Agarwal) ಮತ್ತು ಕಟಿಹಾರ್ ಮೇಯರ್ ಉಷಾ ಅಗರ್ವಾಲ್ (Ashok Agarwal) ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಮೂವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅಮಾನತುಗೊಳಿಸಿರುವುದಾಗಿ ಅದು ಹೇಳಿದೆ.

ಬಿಹಾರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಘಟಕವು ಶನಿವಾರ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್, ಬಿಜೆಪಿ ಎಂಎಲ್‌ಸಿ ಅಶೋಕ್ ಅಗರ್ವಾಲ್ ಮತ್ತು ಕಟಿಹಾರ್ ಮೇಯರ್ ಉಷಾ ಅಗರ್ವಾಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಇವರಿಬ್ಬರು ಪಕ್ಷದೊಳಗೆ ಶಿಸ್ತು ಕಾಯ್ದುಕೊಳ್ಳಲು ವಿಫಲರಾಗಿರುವ ಹಿನ್ನೆಲೆಯಲ್ಲಿ ಪಕ್ಷ ಈ ನಿರ್ಣಯವನ್ನು ಕೈಗೊಂಡಿರುವುದಾಗಿ ತಿಳಿಸಿದೆ.

ಇದನ್ನೂ ಓದಿ: Bihar Election Result 2025: ಎನ್‌ಡಿಗೆ ಗೆಲುವಿಗೆ ಚಕ್ರವ್ಯೂಹವನ್ನೇ ರಚಿಸಿದ್ದ ಚಾಣಾಕ್ಯ; ಗೆಲುವಿನ ಹಿಂದಿರುವ ಸಾರಥಿ ಈ ಮೂವರು!

ಅವರು ನಿರಂತರ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಈ ಕ್ರಮ ಅಗತ್ಯವಾಗಿತ್ತು. ವಾರದೊಳಗೆ ಈ ಮೂವರು ನಾಯಕರು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಬಿಜೆಪಿ ಕಳುಹಿಸಿರುವ ಅಧಿಕೃತ ಪತ್ರದಲ್ಲಿ ತಿಳಿಸಿದೆ.

ಈ ಇಬ್ಬರು ನಾಯಕರು ಚುನಾವಣಾ ಪ್ರಚಾರದ ಸಮಯದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ಮಾಜಿ ಕೇಂದ್ರ ವಿದ್ಯುತ್ ಸಚಿವ, ಅರಾಹ್‌ನ ಮಾಜಿ ಸಚಿವ ಆರ್.ಕೆ. ಸಿಂಗ್ ಅವರು ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದರು ಎನ್ನಲಾಗಿದೆ. ಅದೇ ರೀತಿ ಎಂಎಲ್‌ಸಿ ಅಶೋಕ್ ಅಗರ್ವಾಲ್ ಅವರ ಮಗ ವಿಕಾಸಶೀಲ ಇನ್ಸಾನ್ ಪಕ್ಷದಿಂದ (ವಿಐಪಿ) ಟಿಕೆಟ್‌ ಪಡೆದು ಕತಿಹಾರ್‌ ನಲ್ಲಿ ಬಿಜೆಪಿ ವಿರುದ್ಧ ಕಣಕ್ಕೆ ಇಳಿದಿದ್ದರು.



ಆರ್.ಕೆ. ಸಿಂಗ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದ್ದು, ಅವರು ಪದೇ ಪದೇ ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಪಕ್ಷವು ಬಿಹಾರದಲ್ಲಿ ನಡೆಸಲಾಗುತ್ತಿರುವ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ಈ ಕ್ರಮ ಕೈಗೊಂಡಿದೆ.

ಆರ್.ಕೆ. ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ. ಇದು ಪಕ್ಷಕ್ಕೆ ಹಾನಿಯನ್ನುಂಟು ಮಾಡಿದೆ. ಆದ್ದರಿಂದ, ನಿಮ್ಮನ್ನು ಅಮಾನತುಗೊಳಿಸಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೇ ಪತ್ರ ನೀಡಿದ ಕೆಲವೇ ಗಂಟೆಗಳಲ್ಲಿ ಪಕ್ಷವು ಅವರನ್ನು ತನ್ನ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕುವುದಾಗಿ ತಿಳಿಸಿದೆ.

ಇದನ್ನೂ ಓದಿ: Viral Video: ನ್ಯಾಯ ಕೊಡಿ ಎಂದ ಅತ್ಯಾಚಾರ ಸಂತ್ರಸ್ತೆ ಗೋಳಾಟ! ಪೊಲೀಸ್ ಉಪ ಮಹಾನಿರ್ದೇಶಕರ ಕಚೇರಿ ಬಳಿ ಹೈಡ್ರಾಮಾ, ಇಲ್ಲಿದೆ ವಿಡಿಯೊ

ಸಿಂಗ್ ಅವರು ಬಿಜೆಪಿ ನಾಯಕತ್ವವನ್ನು ಬಹಿರಂಗವಾಗಿ ಟೀಕಿಸಿದ್ದರು. ಅಲ್ಲದೇ ಸರ್ಕಾರಿ ಯೋಜನೆಗಳ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದರು.

ಅಶೋಕ್ ಕುಮಾರ್ ಅಗರ್ವಾಲ್ ಅವರು ಬಿಜೆಪಿ ಅಭ್ಯರ್ಥಿ ತಾರ್ ಕಿಶೋರ್ ಪ್ರಸಾದ್ ವಿರುದ್ಧ ವಿಐಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರ ಮಗ ಸೌರವ್ ಅಗರ್ವಾಲ್ ಪರವಾಗಿ ಪ್ರಚಾರ ನಡೆಸಿದ್ದು, ಇದು ಪಕ್ಷ ವಿರೋಧಿ ಕಾರ್ಯವಾಗಿದೆ ಎಂದು ಹೇಳಿದೆ.

ವಿದ್ಯಾ ಇರ್ವತ್ತೂರು

View all posts by this author