ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತಮಿಳುನಾಡು ವಿಧಾನಸಭಾ ಚುನಾವಣೆಗೂ ಮೊದಲೇ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಮುಂದಿನ ನಡೆ ಏನು?

2026ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಂದೆಯ ಆರೋಗ್ಯ ಹದಗೆಟ್ಟ ಕಾರಣ ಉಸ್ತುವಾರಿ ಹುದ್ದೆಯಿಂದ ಹಿಂದೆ ಸರಿಯುತ್ತಿರುವುದಾಗಿ ಅವರು ಹೇಳಿದ್ದಾರೆ. ಕೊಯಮತ್ತೂರಿನ ಸಿಂಗನಲ್ಲೂರು ಸೇರಿದಂತೆ ಆರು ಕ್ಷೇತ್ರಗಳ ಚುನಾವಣಾ ಪ್ರವಾಸದ ಉಸ್ತುವಾರಿ ಅವರಿಗೆ ನೀಡಲಾಗಿತ್ತು.

ಬಿಜೆಪಿ ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ

ಅಣ್ಣಾಮಲೈ (ಸಂಗ್ರಹ ಚಿತ್ರ) -

ಕೊಯಮತ್ತೂರು: ವಿಧಾನ ಸಭಾ ಚುನಾವಣೆಗೂ (assembly election) ಮೊದಲೇ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Former BJP state president K. Annamala) ಅವರು ಕೊಯಮತ್ತೂರಿನ (Coimbatore) ಸಿಂಗನಲ್ಲೂರು ಸೇರಿದಂತೆ ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇಲ್ಲಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುವ ನೀರಿಕ್ಷೆ ಇದೆ. ತಂದೆಯ ಅನಾರೋಗ್ಯದ ಕಾರಣದಿಂದ ತಮಗೆ ಪ್ರವಾಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರವಾಸದ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.

ವಿಧಾನ ಸಭಾ ಚುನಾವಣೆಯ ತಯಾರಿಯಲ್ಲಿರುವ ತಮಿಳುನಾಡಿನ ಕೊಯಮತ್ತೂರು, ಸಿಂಗನಲ್ಲೂರು ಸೇರಿದಂತೆ ಆರು ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಪ್ರವಾಸದ ಉಸ್ತುವಾರಿ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಅಲ್ಲಿನ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯಿದ್ದು, ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಂಗಾಳ; ತಾವೇ ವಾದ ಮಂಡಿಸಲಿರುವ ಮಮತಾ!

ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯು 41 ಕ್ಷೇತ್ರಗಳಲ್ಲಿ ಹಿರಿಯ ಬಿಜೆಪಿ ನಾಯಕರನ್ನು ಉಸ್ತುವಾರಿಗಳಾಗಿ ನೇಮಿಸಿದೆ. ಇವರಲ್ಲಿ ಅಣ್ಣಾಮಲೈ ಅವರನ್ನು ಸಿಂಗನಲ್ಲೂರು, ಮಧುರೈ ದಕ್ಷಿಣ, ವಿರುಗಂಪಕ್ಕಂ, ಕಾರೈಕುಡಿ, ಶ್ರೀವೈಕುಂಡಂ, ಪದ್ಮನಾಭಪುರಂಗಳಿಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ಈ ಕುರಿತು ಕೊಯಮತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯ ಅನಾರೋಗ್ಯದ ಕಾರಣದಿಂದ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ತಂದೆಯವರ ಆರೋಗ್ಯ ಸರಿಯಿಲ್ಲ. ಹೀಗಾಗಿ ಅವರನ್ನು ನೋಡಿಕೊಳ್ಳಲು ನಾನು ಕೊಯಮತ್ತೂರಿನಲ್ಲಿ ಉಳಿದುಕೊಳ್ಳಬೇಕಿದೆ. ಇದು ನನ್ನ ಮೊದಲ ಕರ್ತವ್ಯ. ಆದ್ದರಿಂದ ನನಗೆ ಪಕ್ಷದ ಪರವಾಗಿ ಪ್ರಚಾರಕ್ಕೆ ಹೆಚ್ಚು ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂತಿರನ್ ಅವರಿಗೆ ತಿಳಿಸಿದ್ದೇನೆ. ಪಕ್ಷವು ಬೇರೆ ಉಸ್ತುವಾರಿಯನ್ನು ನಿಯೋಜಿಸುತ್ತದೆ. ಪ್ರಚಾರದಲ್ಲಿ ನಾನು ಕೆಲಸ ಮಾಡುತ್ತೇನೆ. ಈ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಲೋಕಸಭೆಯಿಂದ 8 ವಿಪಕ್ಷ ಸಂಸದರ ಅಮಾನತು; ಸದನದಲ್ಲಿ ಅಂತದ್ದೇನಾಯ್ತು?

2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. 2024ರ ಸಂಸತ್ ಚುನಾವಣೆಗೆ ಸ್ಪರ್ಧಿಸಿದಾಗಿನಿಂದ ಜನರನ್ನು ಭೇಟಿ ಮಾಡುವ ಸಲುವಾಗಿ ಪ್ರತ್ಯೇಕ ಮನೆಯನ್ನು ಬಾಡಿಗೆಗೆ ಪಡೆದಿದ್ದೇನೆ. ಬಿಜೆಪಿಯಲ್ಲಿ ಕೊಯಮತ್ತೂರಿನಲ್ಲಿ ಶಾಸಕಿ ವನತಿ ಶ್ರೀನಿವಾಸನ್ ಇದ್ದಾರೆ. ಅವರು ಟಿಕೆಟ್ ಪಡೆದ ಅನಂತರ 2026 ರ ಚುನಾವಣೆಯಲ್ಲಿ ಬಹುಮತದ ಮತಗಳೊಂದಿಗೆ ಗೆಲ್ಲಬೇಕು ಎಂಬುದಾಗಿ ತಿಳಿಸಿದರು.

ಯಾವುದೇ ವೈಯಕ್ತಿಕ ಚಿಂತನೆ ಇಲ್ಲ. ರಾಷ್ಟ್ರೀಯ ನಾಯಕರು ಏನು ಸೂಚಿಸಿದ್ದಾರೆ ಎಂಬುದರ ಕುರಿತು ಸ್ಪಷ್ಟವಾಗಿದೆ. ಆ ಕಾರ್ಯಗಳ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ಒಂದು ತಿಂಗಳೊಳಗೆ ಮುಂದಿನ ಬೆಳವಣಿಗೆಗಳ ಬಗ್ಗೆ ತಿಳಿಯುತ್ತದೆ ಎಂದು ಅವರು ಹೇಳಿದರು.