ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Sting Operation: ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ ಕೋರ್ಟ್‌ನಿಂದ ಪ್ರತಿಬಂಧಕಾದೇಶ

ವೈರಲ್ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ಆರೋಪಗಳ ಪ್ರಸಾರ ಹಾಗೂ ಹಂಚಿಕೆಗೆ ತಡೆ ನೀಡುವಂತೆ ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್‌ನಿಂದ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಲಾಗಿದೆ.

ಬೆಂಗಳೂರು: ಸ್ಟಿಂಗ್ ಆಪರೇಷನ್ (Karnataka Sting Operation) ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಎರಡು ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ 42 ಮಾಧ್ಯಮ ಸಂಸ್ಥೆಗಳು, ಡಿಜಿಟಲ್ ವೇದಿಕೆಗಳು ಹಾಗೂ ಇತರ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಬೆಂಗಳೂರಿನ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ.

ವೈರಲ್ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ಆರೋಪಗಳ ಪ್ರಸಾರ ಹಾಗೂ ಹಂಚಿಕೆಗೆ ತಡೆ ನೀಡುವಂತೆ ಕೋರಿ ಮಾಜಿ ಸಿಎಂ ಅವರು 42 ಮಾಧ್ಯಮ ಸಂಸ್ಥೆಗಳು ಹಾಗೂ ಡಿಜಿಟಲ್ ವೇದಿಕೆಗಳ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದೀಗ ಅವರ ಮನವಿಗೆ ಸ್ಪಂದಿಸಿರುವ ನ್ಯಾಯಾಲಯವು, ಆಕ್ಷೇಪಾರ್ಹವಾದ ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ಪ್ರತಿಬಂಧಕಾದೇಶ ಹೊರಡಿಸಿದೆ.

ನ್ಯಾಯಾಧೀಶರಾದ ಬಿ ಪುಷ್ಪಾಂಜಲಿ ಅವರು ಮಂಗಳವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಕೋರಿರುವ ಅರ್ಜಿಯ ಕುರಿತು ಆದೇಶ ಪ್ರಕಟಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸೆಪ್ಟೆಂಬರ್‌ 27 ಮತ್ತು ಅಕ್ಟೋಬರ್‌ 2ರಂದು ಪ್ರಸಾರ ಮಾಡಿರುವ ಎರಡು ವಿಡಿಯೊಗಳು, ಅದರ ಸಂಬಂಧಿತ ಕ್ಲಿಪ್‌, ಸ್ಕ್ರೀನ್‌ಶಾಟ್‌, ಎಡಿಟ್‌ ಮಾಡಿರುವ ದೃಶ್ಯ ಅಥವಾ ಸಂವಾದವನ್ನು ಪ್ರಕಟಿಸದಂತೆ ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶವನ್ನು ನ್ಯಾಯಾಲಯ ನೀಡಿದೆ.

Karnataka Sting Operation: ಸ್ಟಿಂಗ್ ಆಪರೇಷನ್ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಯಾವುದೇ ಮಾಧ್ಯಮದ ಮೂಲಕ ಪ್ರತಿವಾದಿಗಳು, ಮಾಧ್ಯಮಗಳು ಆಕ್ಷೇಪಾರ್ಹವಾದ ವಿಡಿಯೋಗಳನ್ನು ಮಾಜಿ ಸಿಎಂ ವಿರುದ್ಧ ಪ್ರಸಾರ ಮಾಡಬಾರದು ಎಂದು ನ್ಯಾಯಾಲಯ ಹೇಳಿದ್ದು, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.