ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLC Election 2026: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ; ಬೀದರ್‌ ಜಿಲ್ಲೆಯಲ್ಲಿ ಶೇ. 86.47 ಮತದಾನ ದಾಖಲು

North-East Teachers Constituency Election: ಬೀದರ್ ಜಿಲ್ಲೆಯಲ್ಲಿ ಒಟ್ಟು 7,038 ನೋಂದಾಯಿತ ಶಿಕ್ಷಕ ಮತದಾರರಿದ್ದಾರೆ. ಈ ಪೈಕಿ 3414 ಪುರುಷರು ಹಾಗೂ 2672 ಮಹಿಳೆಯರು ಸೇರಿ ಒಟ್ಟು 6086 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಶೇ. 86.47 ರಷ್ಟು ಮತದಾನ ಜರುಗಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೀದರ್‌ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನದ ಹಕ್ಕು ಚಲಾಯಿಸಿದರು.

ಬೀದರ್‌: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ (North-East Teachers Constituency Election) ಬೀದರ್‌ ಜಿಲ್ಲೆಯಾದ್ಯಂತ ಶುಕ್ರವಾರ ಬಿರುಸಿನ ಮತದಾನ ಜರುಗಿತು. ಮತದಾನ ಪ್ರಕ್ರಿಯೆಯು ಅತ್ಯಂತ ಶಾಂತಿಯುತವಾಗಿ ನಡೆದಿದ್ದು, ಜಿಲ್ಲೆಯಲ್ಲಿ ಶೇ. 86.47 ರಷ್ಟು ಮತದಾನ ದಾಖಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 7,038 ನೋಂದಾಯಿತ ಶಿಕ್ಷಕ ಮತದಾರರಿದ್ದು, ಈ ಪೈಕಿ 3,794 ಪುರುಷರು ಹಾಗೂ 3,244 ಮಹಿಳೆಯರು ಇದ್ದಾರೆ. ಇವರಲ್ಲಿ 3414 ಪುರುಷರು ಹಾಗೂ 2672 ಮಹಿಳೆಯರು ಸೇರಿ ಒಟ್ಟು 6086 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಇದರಿಂದಾಗಿ ಪುರುಷರ ಮತದಾನದ ಪ್ರಮಾಣ ಶೇ. 89.98 ಹಾಗೂ ಮಹಿಳೆಯರ ಮತದಾನದ ಪ್ರಮಾಣ ಶೇ. 82.37 ಆಗಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಶೇ. 86.47 ರಷ್ಟು ಮತದಾನ ಜರುಗಿದೆ.

ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲೂ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದ್ದು, ಮತದಾನವು ಸುಸೂತ್ರವಾಗಿ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಸಹಾಯಕ ಆಯುಕ್ತ ಅಭಿನವ್ ಜೈನ್ ಅವರು ಬೀದರ್ ನಗರ, ಹಳ್ಳಿಖೇಡ, ಹುಮನಾಬಾದ್, ರಾಜೇಶ್ವರ ಹಾಗೂ ದುಬಲಗುಂಡಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗದ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರೂ ಸಹ ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು.

ಬಿಜೆಪಿಯ ಶಶೀಲ್ ನಮೋಶಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ರಾಜಕೀಯ ಪಕ್ಷದ ನೇತಾರರು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನದ ಪ್ರಕ್ರಿಯೆ ಪರಿಶೀಲಿಸಿದರು.