Bihar Assembly Election: ಚುನಾವಣೆಗೂ ಮನ್ನ ಮಹಿಳೆಯರಿಗೆ ಭರ್ಜರಿ ಗಿಫ್ಟ್; ಸರ್ಕಾರಿ ಉದ್ಯೋಗಗಳಲ್ಲಿ 35% ಮೀಸಲು ಘೋಷಣೆ
ಬಿಹಾರದ ಮೂಲ ನಿವಾಸಿಗಳಾದ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರಿ ಸೇವೆಗಳು ಮತ್ತು ಉದ್ಯೋಗಗಳಿಗೆ ನೇರ ನೇಮಕಾತಿಯಲ್ಲಿ 35% ಮೀಸಲಾತಿ ನೀಡಲಾಗುವುದು ಎಂದು ಅಧಿಕೃತ ಘೋಷಣೆ ಹೊರಬಿದ್ದಿದೆ. ಇದರ ಜೊತೆಗೆಬಿಹಾರ ಯುವ ಆಯೋಗವನ್ನು ರಚಿಸಲು ಸರ್ಕಾರ ಮುಂದಾಗಿದೆ. ಇದು ರಾಜ್ಯದಲ್ಲಿ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತದೆ.


ಪಟನಾ: ಬಿಹಾರದಲ್ಲಿ ದಿನೇ ದಿನೆ ವಿಧಾನಸಭೆ ಚುನಾವಣೆ(Bihar Assembly Election) ರಂಗೇರುತ್ತಿದೆ. ಈಗಾಗಲೇ ಅಧಿಕಾರದ ಗದ್ದುಗೆಯಲ್ಲಿ ಕುಳಿತಿರುವ ನಿತೀಶ್ ಕುಮಾರ್(Nitish Kumar) ನೇತೃತ್ವದ ಸರ್ಕಾರ ಮುಂದಿನ ಬಾರಿಯೂ ಅಧಿಕಾರ ಉಳಿಸಿಕೊಳ್ಳಲು ನಾನಾ ರೀತಿಯ ಕಸರತ್ತು ನಡೆಸುತ್ತಿದೆ. ಹೀಗಿರುವಾಗಲೇ ನಿತೀಶ್‌ಕುಮಾರ್ ಸರ್ಕಾರ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ವೊಂದನ್ನು ಘೋಷಿಸಿದ್ದಾರೆ. ಎಲ್ಲಾ ಸರ್ಕಾರಿ ಹುದ್ದೆ ಅಥವಾ ಸೇವೆಗಳಲ್ಲಿ ಮಹಿಳೆಯರಿಗೆ ಶೇ.35ಮೀಸಲಾತಿ(Quota For Women In Govt Jobs) ಘೋಷಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ನಿತೀಶ್ ಕುಮಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಬಿಹಾರದ ಮೂಲ ನಿವಾಸಿಗಳಾದ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರಿ ಸೇವೆಗಳು ಮತ್ತು ಉದ್ಯೋಗಗಳಿಗೆ ನೇರ ನೇಮಕಾತಿಯಲ್ಲಿ 35% ಮೀಸಲಾತಿ ನೀಡಲಾಗುವುದು ಎಂದು ಅಧಿಕೃತ ಘೋಷಣೆ ಹೊರಬಿದ್ದಿದೆ. ಇದರ ಜೊತೆಗೆಬಿಹಾರ ಯುವ ಆಯೋಗವನ್ನು ರಚಿಸಲು ಸರ್ಕಾರ ಮುಂದಾಗಿದೆ. ಇದು ರಾಜ್ಯದಲ್ಲಿ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತದೆ. ಬಿಹಾರದ ಯುವಕರಿಗೆ ಹೆಚ್ಚು ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸುವ, ಅವರಿಗೆ ತರಬೇತಿ ನೀಡುವ ಮತ್ತು ಅವರನ್ನು ಸಮರ್ಥರನ್ನಾಗಿ ಮಾಡುವ ಗುರಿಯೊಂದಿಗೆ, ರಾಜ್ಯ ಸರ್ಕಾರವು ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಇಂದು ಸಂಪುಟವು ಬಿಹಾರ ಯುವ ಆಯೋಗದ ರಚನೆಗೆ ಅನುಮೋದನೆ ನೀಡಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ ಎಂದು ನಿತೀಶ್ ಕುಮಾರ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.
मुझे यह बताते हुए प्रसन्नता हो रही है कि बिहार के युवाओं को अधिक से अधिक रोजगार के अवसर उपलब्ध कराने, उन्हें प्रशिक्षित करने तथा सशक्त और सक्षम बनाने के उद्देश्य से राज्य सरकार ने बिहार युवा आयोग के गठन का निर्णय लिया है और आज कैबिनेट द्वारा बिहार युवा आयोग के गठन की मंजूरी भी दे…
— Nitish Kumar (@NitishKumar) July 8, 2025
ಈ ಸುದ್ದಿಯನ್ನೂ ಓದಿ:Nitish Kumar: ಲಾಲು ಆಫರ್‌ಗೆ ನಿತೀಶ್ ಕುಮಾರ್ ಹೇಳಿದ್ದೇನು? ಬಿಹಾರ ಚುನಾವಣೆಗೆ ಮುನ್ನ ನಡೆಯುತ್ತಾ ಮರು ಮೈತ್ರಿ ?
ಬಿಹಾರ ಯುವ ಆಯೋಗವು ಒಬ್ಬ ಅಧ್ಯಕ್ಷರು, ಇಬ್ಬರು ಉಪಾಧ್ಯಕ್ಷರು ಮತ್ತು ಏಳು ಸದಸ್ಯರನ್ನು ಒಳಗೊಂಡಿರುತ್ತದೆ. ಗರಿಷ್ಠ ವಯೋಮಿತಿ 45 ವರ್ಷಗಳು. ರಾಜ್ಯದ ಸ್ಥಳೀಯ ಯುವಕರಿಗೆ ರಾಜ್ಯದೊಳಗೆ ಖಾಸಗಿ ವಲಯದ ಉದ್ಯೋಗದಲ್ಲಿ ಆದ್ಯತೆ ನೀಡಲಾಗಿದೆಯೇ ಎಂದು ಈ ಆಯೋಗವು ಮೇಲ್ವಿಚಾರಣೆ ಮಾಡುತ್ತದೆ. ಅಲ್ಲದೇ ರಾಜ್ಯದ ಹೊರಗೆ ಅಧ್ಯಯನ ಮಾಡುವ ಮತ್ತು ಕೆಲಸ ಮಾಡುವ ಯುವಕರ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ.
243 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಬಿಹಾರದಲ್ಲಿ ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕಳೆದ ತಿಂಗಳು, ನಿತೀಶ್ ಕುಮಾರ್ ಅವರು ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪಿಂಚಣಿಯನ್ನು 400 ರೂ.ಗಳಿಂದ 1100 ರೂ.ಗಳಿಗೆ ಹೆಚ್ಚಿಸಿದೆ ಎಂದು ಘೋಷಿಸಿದ್ದರು. ಜುಲೈ ತಿಂಗಳಿನಿಂದ ಫಲಾನುಭವಿಗಳಿಗೆ ಹೆಚ್ಚಿದ ಪಿಂಚಣಿ ದೊರೆಯುತ್ತದೆ ಮತ್ತು ನಂತರ ಪ್ರತಿ ತಿಂಗಳು 10 ನೇ ತಾರೀಖಿನಂದು ಖಾತೆಗೆ ಜಮಾ ಮಾಡಲಾಗುತ್ತದೆ.