ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು; ಬಿ.ಎಸ್‌.ಯಡಿಯೂರಪ್ಪ ಸೇರಿ ಪ್ರಮುಖರಿಂದ ಶುಭ ಹಾರೈಕೆ

Rajya Sabha, MLC elections: ರಾಜ್ಯಸಭಾ ಚುನಾವಣೆಗೆ ಆರ್‌ಎಸ್‌ಎಸ್ ಹಿನ್ನೆಲೆಯುಳ್ಳ ಹಿರಿಯ ಮುಖಂಡ ಪ್ರೊ. ಎಂ. ನಾಗರಾಜು ಅವರನ್ನು ಇಳಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಇನ್ನು ವಿಧಾನ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದ್ದು, ಇಂದು ವಿಧಾನಸೌಧದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ರಾಜ್ಯಸಭೆ, ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಪ್ರೊ.ಎಂ.ನಾಗರಾಜ್ ಹಾಗೂ ವಿಧಾನ ಪರಿಷತ್ ಚುನಾವಣೆಗೆ (Rajya Sabha, MLC elections) ಪಕ್ಷದ ಅಭ್ಯರ್ಥಿಗಳಾದ ಲಿಂಗರಾಜ್‌ ಪಾಟೀಲ್‌ ಮತ್ತು ರಘು ಕೌಟಿಲ್ಯ ಅವರು ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯರಾದ ಲೆಹರ್‌ ಸಿಂಗ್‌ ಸಿರೋಯಾ, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಎನ್‌.ರವಿಕುಮಾರ್ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಎಚ್.ಡಿ.ದೇವೇಗೌಡರಿಗೆ ಕೈತಪ್ಪಿದ ಟಿಕೆಟ್

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ದೆಹಲಿ ವರಿಷ್ಠರು ಸಾಕಷ್ಟು ಅಳೆದುತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ರಾಜ್ಯಸಭಾ ಕಣಕ್ಕೆ ಆರ್‌ಎಸ್‌ಎಸ್ ಹಿನ್ನೆಲೆಯುಳ್ಳ ಹಿರಿಯ ಮುಖಂಡ ಪ್ರೊ. ಎಂ. ನಾಗರಾಜು ಅವರನ್ನು ಇಳಿಸಲು ಹೈಕಮಾಂಡ್ ನಿರ್ಧರಿಸಿದೆ. ಇನ್ನು ವಿಧಾನ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದೆ.

ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮತ್ತೆ ರಾಜ್ಯಸಭೆ ಸ್ಥಾನ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಅಲ್ಲದೆ, ರಾಜ್ಯ ಬಿಜೆಪಿ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಶಾಸಕ ನಿರ್ಮಲ ಕುಮಾರ್ ಸುರಾನ ಹೆಸರುಗಳನ್ನು ಸಹ ಹೈಕಮಾಂಡ್​​ಗೆ ಕಳುಹಿಸಿದೆ ಎನ್ನಲಾಗಿತ್ತು. ಆದರೆ ಹೈಕಮಾಂಡ್ ಇವೆಲ್ಲರನ್ನೂ ಬಿಟ್ಟು ಪ್ರೊ ಎಂ.ನಾಗರಾಜ್ ಅವರಿಗೆ ಮಣೆ ಹಾಕಿದೆ.

ರಾಜ್ಯಸಭೆ ಸದಸ್ಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಮತ್ತು ನಾರಾಯಣ ಕೊರಗಪ್ಪ ಅವರ ಅವಧಿ ಜೂನ್ 25ಕ್ಕೆ ಮುಕ್ತಾಯವಾಗಲಿದೆ.

ಪಿಯು ಉಪನ್ಯಾಸಕ ಸಂಘದ ಚುನಾವಣೆ: ಅಧ್ಯಕ್ಷರಾಗಿ ಡಾ.ಸಿ.ಶಂಕರಪ್ಪ ಪ್ರ.ಕಾರ್ಯದರ್ಶಿ ಮಧುಸೂಧನ್ ಆಯ್ಕೆ

ಇನ್ನು ಜೂನ್ 30ಕ್ಕೆ ಏಳು ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ನಸೀರ್ ಅಹ್ಮದ್, ಎಂ.ಟಿ.ಬಿ. ನಾಗರಾಜ್, ಪ್ರತಾಪ್ ಸಿಂಹ ನಾಯಕ್, ತಿಪ್ಪಣ್ಣಪ್ಪ, ಸುನೀಲ್ ವಲ್ಯಾಪುರ, ಬಿ.ಕೆ. ಹರಿಪ್ರಸಾದ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಚುನಾವಣೆ ಎದುರಾಗಿದೆ.

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಹಾಗೂ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.