ಬೆಂಗಳೂರು, ಮಾ.17: ಮತದಾರರ ಹೆಸರನ್ನು ಪರಿಶೀಲಿಸುವ ಜಿಬಿಎ (GBA) ವೆಬ್‍ಸೈಟ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಮತ್ತು ವೆಬ್‍ಸೈಟ್ ಯುಆರ್‌ಎಲ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಿದ ನಂತರ ಹಕ್ಕು ಮತ್ತು ಆಕ್ಷೇಪಣೆ ದಿನಾಂಕವನ್ನು ವಿಸ್ತರಿಸಬೇಕು ಎಂದು ಬಿಜೆಪಿ (BJP Karnataka) ಒತ್ತಾಯಿಸಿದೆ. ಈ ಕುರಿತು ಬಿಜೆಪಿ ಬೆಂಗಳೂರು ಮಹಾನಗರದ ಅಧ್ಯಕ್ಷರು ಮಂಗಳವಾರ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ಜಿಬಿಎಯ ಯುಆರ್‌ಎಲ್‍ನಲ್ಲಿ ಕಳೆದ ವಾರದಿಂದ ಬಳಕೆದಾರರು ವಿವರಗಳು ಅಥವಾ ಮತದಾರರ ಚೀಟಿ (ಎಪಿಕ್ ಕಾರ್ಡ್) ಬಳಸಿ ತಮ್ಮ ಹೆಸರನ್ನು ಹುಡುಕಲು ಸಾಧ್ಯವಾಗುತ್ತಿಲ್ಲ ಎಂಬುದರ ಕುರಿತು ಮನವಿಯಲ್ಲಿ ತಿಳಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ದಿನಾಂಕವನ್ನು ವಿಸ್ತರಿಸಲಾಗಿದ್ದರೂ, ನಾಗರಿಕರು ಮತ್ತು ರಾಜಕೀಯ ಪಕ್ಷಗಳು ಪೋರ್ಟಲ್‍ನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಹುಡುಕದೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಗಮನಕ್ಕೆ ತರಲಾಗಿದೆ.
ಸಭಾಧ್ಯಕ್ಷರು ಸದನದಿಂದ ಹೊರನಡೆದಿರುವುದು ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ
ಈ ಸಂದರ್ಭದಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲೆ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷ ಸಪ್ತಗಿರಿ ಗೌಡ ಅವರು ಉಪಸ್ಥಿತರಿದ್ದರು.