ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

BJP Karnataka: ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

BJP Karnataka: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶುಕ್ರವಾರ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ಈ ಕುರಿತ ವಿವರ ಇಲ್ಲಿದೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.

ಬೆಂಗಳೂರು‌, ಮಾ.13: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ನೇತೃತ್ವದಲ್ಲಿ ಶುಕ್ರವಾರ ನಗರದ ಮಲ್ಲೇಶ್ವರದ ಬಿಜೆಪಿ (BJP Karnataka) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಚಿವ ಬಿ. ಶ್ರೀರಾಮುಲು ಉಪಸ್ಥಿತರಿದ್ದರು.

ಆದಾಯ ಸಂಗ್ರಹದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಈ ಕುರಿತು ಮಾತನಾಡಿದ ಅವರು, ಈ ಬಜೆಟ್ ಗಮನಿಸಿದರೆ ಈ ಸರ್ಕಾರದ ಆರ್ಥಿಕ- ಬೌದ್ಧಿಕ ದಿವಾಳಿತನವು ಕೂಡ ಪ್ರದರ್ಶನಗೊಂಡಿದೆ ಎಂದು ಟೀಕಿಸಿದ್ದಾರೆ.

ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಸಂಧ್ಯಾಕಾಲದಲ್ಲಿ 17ನೇ ಬಜೆಟ್ ಮಂಡಿಸಿದ್ದಾರೆ. ಅವರಿಗೆ ಒಂದು ಸುವರ್ಣಾವಕಾಶ ಇತ್ತು. ತಮ್ಮ ರಾಜಕೀಯ ಜೀವನದ ಸುದೀರ್ಘ ಅನುಭವದ ಆಧಾರದ ಮೇಲೆ ರಾಜ್ಯದ ಸಂಕಷ್ಟಗಳಿಗೆ ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಉತ್ತರ ಕಂಡುಕೊಳ್ಳುವ ಅವಕಾಶ ಇತ್ತು. ಆದರೆ, ಈ ಬಜೆಟ್ ನೋಡಿದಾಗ ಅಸಹಾಯಕರಾಗಿ ಕೈಚೆಲ್ಲಿದ್ದಾರೆಂಬ ಭಾವನೆ ರಾಜ್ಯದ ಜನರಲ್ಲಿ ಮೂಡಿದೆ ಎಂದು ಆರೋಪಿಸಿದರು.

ಒಟ್ಟಾರೆಯಾಗಿ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿ ಕೈ ತೊಳೆದುಕೊಳ್ಳುವ ಕುತಂತ್ರಕ್ಕೆ ಈ ಬಜೆಟ್ಟನ್ನು ಸೀಮಿತ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆದಾಯ ಸಂಗ್ರಹದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅತಿ ಹೆಚ್ಚು ಸಾಲ ಮಾಡುವ ಮೂಲಕ ಈ ನಾಡಿನ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಎಂದು ದೂರಿದರು.

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರದಿಂದ ಅಗತ್ಯ ಕ್ರಮ ಎಂದ ವಿಜಯೇಂದ್ರ

ಪದೇ ಪದೇ ಬೆಲೆ ಏರಿಕೆಯ ಬ್ರಹ್ಮಾಸ್ತ್ರ

ಸಾಲದ ಭಾರ ಒಂದು ಕಡೆಯಾದರೆ, ಅಸಲು, ಬಡ್ಡಿ ಕಟ್ಟುವುದೇ ರಾಜ್ಯಕ್ಕೆ ದೊಡ್ಡ ಹೊರೆ ಆಗಿದೆ. ವಿತ್ತೀಯ ಕೊರತೆ ಹೆಚ್ಚಾಗಿ ರಾಜ್ಯದ ಜನರ ಮೇಲೆ ಪದೇಪದೇ ಬೆಲೆ ಏರಿಕೆಯ ಬ್ರಹ್ಮಾಸ್ತ್ರವನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡುತ್ತಿರುವುದು ಈ ನಾಡಿನ ದುರಂತ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಮುಖ್ಯಮಂತ್ರಿಗಳು ಬಜೆಟ್ ಅನ್ನು ಸುದೀರ್ಘವಾಗಿ ಓದುತ್ತಿರುವಾಗ ಆಡಳಿತ ಪಕ್ಷದ ಸದಸ್ಯರನ್ನು ಗಮನಿಸುತ್ತಿದ್ದೆ. ಆಡಳಿತ ಪಕ್ಷದ ಸದಸ್ಯರಿಗೂ ಈ ಬಜೆಟ್ ಬಗ್ಗೆ ಆಸಕ್ತಿ ಇರಲಿಲ್ಲ, ಅವರು ಅಸಹಾಯಕರಾಗಿ ಸದನದಿಂದ ಹೊರಹೋದ ಘಟನೆಯನ್ನೂ ನಾನು ಗಮನಿಸಿದ್ದೇನೆ ಎಂದು ತಿಳಿಸಿದರು.