ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP National president: ಇದೇ ತಿಂಗಳಲ್ಲಿ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕ

BJP National president: 2019 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿರುವ ಜಗತ್ ಪ್ರಕಾಶ್ ನಡ್ಡಾ ಅವರ ಕಾರ್ಯಾವಧಿ ಪೂರ್ಣಗೊಂಡಿದೆ. ಹೀಗಾಗಿ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆಯತ್ತ ಬಿಜೆಪಿ ಮುಖಮಾಡಿದೆ. ಏಪ್ರಿಲ್ 4 ರಂದು ನಡೆಯುತ್ತಿರುವ ಸಂಸತ್ತಿನ ಅಧಿವೇಶನ ಮುಗಿದ ನಂತರ ಮುಂದಿನ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ವೇಗ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇದೇ ತಿಂಗಳಲ್ಲಿ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕ

Profile Rakshita Karkera Apr 2, 2025 8:56 AM

ನವದೆಹಲಿ: ಸಂಸತ್‌ ಅಧಿವೇಶನ ಮುಗಿಯುತ್ತಿದ್ದಂತೆ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು(BJP National president) ನೇಮಿಸಲು ಬಿಜೆಪಿ ಸಜ್ಜಾಗಿದೆ. ಏಪ್ರಿಲ್ 4 ರಂದು ನಡೆಯುತ್ತಿರುವ ಸಂಸತ್ತಿನ ಅಧಿವೇಶನ ಮುಗಿದ ನಂತರ ಮುಂದಿನ ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ವೇಗ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ ಮೂರನೇ ವಾರದೊಳಗೆ ಬಿಜೆಪಿ ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಉಳಿದ ಹೆಚ್ಚಿನ ರಾಜ್ಯಗಳಿಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಘೋಷಣೆ ಮುಂದಿನ ವಾರದೊಳಗೆ ಪೂರ್ಣಗೊಳ್ಳಲಿದೆ.

ಇಲ್ಲಿಯವರೆಗೆ 13 ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆಗಳು ಪೂರ್ಣಗೊಂಡಿದ್ದು, ಆಯಾ ರಾಜ್ಯಗಳ ಅಧ್ಯಕ್ಷರನ್ನು ಈಗಾಗಲೇ ಘೋಷಿಸಲಾಗಿದೆ. ಉಳಿದ 19 ರಾಜ್ಯಗಳಿಗೆ ರಾಜ್ಯಾಧ್ಯಕ್ಷರ ಹೆಸರುಗಳನ್ನು ಘೋಷಿಸಿದ ನಂತರ, ಪಕ್ಷವು ತನ್ನ ಮುಂದಿನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯೊಂದಿಗೆ ಮುಂದುವರಿಯುತ್ತದೆ. ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಪಕ್ಷವು ತನ್ನ ರಾಜ್ಯ ಘಟಕಗಳಲ್ಲಿ ಕನಿಷ್ಠ ಅರ್ಧದಷ್ಟು ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸಬೇಕೆಂದು ಪಕ್ಷದ ನಿಯಮವಾಗಿದೆ. ಹೀಗಾಗಿ ಈ ಪ್ರಕ್ರಿಯೆ ವಿಳಂಬವಾಗಿತ್ತು.

ಈ ಸುದ್ದಿಯನ್ನೂಓದಿ: BJP Karnataka: ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಬಿ.ವೈ.ವಿಜಯೇಂದ್ರ

ಇನ್ನು 2019 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿರುವ ಜಗತ್ ಪ್ರಕಾಶ್ ನಡ್ಡಾ ಅವರ ಕಾರ್ಯಾವಧಿ ಪೂರ್ಣಗೊಂಡಿದೆ. ಹೀಗಾಗಿ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆಯತ್ತ ಬಿಜೆಪಿ ಮುಖಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅಧಿಕಾರಾವಧಿ ಮೂರು ವರ್ಷಗಳಾಗಿದ್ದು, 2024 ರ ಲೋಕಸಭಾ ಚುನಾವಣೆಯ ಸಿದ್ಧತೆಗೆ ಯಾವುದೇ ತೊಂದರೆಯುಂಟಾಗಬಾರದೆಂಬ ಕಾರಣದಿಂದ ಅವರ ಅಧಿಕಾರಾವಧಿಯನ್ನು ಮತ್ತೆ ಮತ್ತೆ ವಿಸ್ತರಿಸಲಾಗಿತ್ತು.