ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BJP Padayatra: ವಂದೇ ಮಾತರಂ ಗೀತೆ ಮೊಟಕು; ರಾಜ್ಯ ಸರ್ಕಾರದ ವಿರುದ್ಧ ಸೆ.15ರಿಂದ ಬಿಜೆಪಿ ಪಾದಯಾತ್ರೆ

Vande Mataram Row: ರಾಜ್ಯ ಸರ್ಕಾರವು ವಂದೇ ಮಾತರಂ ಗೀತೆ ಮೊಟಕು ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ವಂದೇ ಮಾತರಂ ಗೀತೆ ಮೊಟಕು ವಿರೋಧಿಸಿ ಸೆ.15ರಿಂದ ಬಿಜೆಪಿ ಪಾದಯಾತ್ರೆ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ -

Prabhakara R
Prabhakara R Sep 12, 2026 6:11 PM

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ ಮಾಡಿದ ಬೆನ್ನಲ್ಲೇ ಮತ್ತೊಂದು ಪಾದಯಾತ್ರೆಗೆ ರಾಜ್ಯ ಬಿಜೆಪಿ ಮುಂದಾಗಿದೆ. ಸೆಪ್ಟೆಂಬರ್​ 15ರಿಂದ ಐದು ದಿನಗಳ ಕಾಲ ಬೃಹತ್ ಪಾದಯಾತ್ರೆ ನಡೆಸುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ. ವಂದೇ ಮಾತರಂ ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಿದರೆ ಸಾಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದನ್ನು ವಿರೋಧಿಸಿ ಬಿಜೆಪಿ ಐದು ದಿನಗಳ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.

ರಾಜ್ಯ ಸರ್ಕಾರವು ವಂದೇ ಮಾತರಂ ಗೀತೆ ಮೊಟಕು ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಪ್ರತಿ ಕ್ಷೇತ್ರದಲ್ಲೂ ಅರ್ಧ ಕಿ.ಮೀನಿಂದ ಒಂದು ಕಿ.ಮೀವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಲಾಗುತ್ತದೆ. ಈ ಮೂಲಕ ಸಚಿವ ಸಂಪುಟದ ಆದೇಶವನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ತೀವ್ರ ಒತ್ತಡ ಹೇರಲು ಮುಂದಾಗಿದೆ.

ವಂದೇ ಮಾತರಂ ಕೇವಲ ಹಾಡು ಅಲ್ಲ. ಸಿಎಂ ಡಿಕೆ ಶಿವಕುಮಾರ್ ಎರಡೇ ಚರಣ ಹಾಡಬೇಕು ಎಂದು ತೀರ್ಮಾನಿಸಿರುವುದು ದುರ್ದೈವ. ಅಲ್ಪಸಂಖ್ಯಾತರ ಓಲೈಕೆಗೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಈ ನಿರ್ಧಾರ ಮಾಡಿದೆ. ಡಿ.ಕೆ.ಶಿವಕುಮಾರ್ ಅವರು ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಅವರಿಂದ ಪಾಠ ಕಲಿಯಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.