ಕೆಲವರ ಹೆಸರು ತೇಲಿಬಿಟ್ಟು ಕಾಂಗ್ರೆಸ್ ಕುತಂತ್ರ; ಅಡ್ಡ ಮತದಾನ ಮಾಡಿದವರ ಪತ್ತೆಗೆ ಸಮಿತಿ ರಚನೆ ಎಂದ ಬಿ.ವೈ. ವಿಜಯೇಂದ್ರ
BY Vijayendra: ಕಾಂಗ್ರೆಸ್‍ನ ಕುತಂತ್ರಕ್ಕೆ ನಾವು ತಲೆಕೆಡಿಸಿಕೊಳ್ಳಲ್ಲ. ಅಡ್ಡ ಮತದಾನ ಮಾಡಿದವರ ಪತ್ತೆಗೆ ಸಮಿತಿ ರಚಿಸಲಾಗಿದೆ. ಯಾರು ಅಡ್ಡ ಮತನದಾನ ಮಾಡಿದ್ದಾರೆ ಎಂಬುದು ಮೂರ್ನಾಲ್ಕು ದಿನದಲ್ಲಿ ತಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (ಸಂಗ್ರಹ ಚಿತ್ರ) -
ಬೆಂಗಳೂರು, ಜೂ.19: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರು ಎಂದು ಕೆಲವರ ಹೆಸರುಗಳನ್ನು ತೇಲಿಬಿಡುವ ಮೂಲಕ ಬಿಜೆಪಿಯಲ್ಲಿ ಬೆಂಕಿ ಹಚ್ಚುವ ಕುತಂತ್ರವನ್ನು ಕಾಂಗ್ರೆಸ್‍ನವರು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್‍ನ ಕುತಂತ್ರಕ್ಕೆ ನಾವು ತಲೆಕೆಡಿಸಿಕೊಳ್ಳಲ್ಲ. ಅಡ್ಡ ಮತದಾನ ಮಾಡಿದವರ ಪತ್ತೆಗೆ ಸಮಿತಿ ರಚಿಸಲಾಗಿದೆ. ಯಾರು ಅಡ್ಡ ಮತನದಾನ ಮಾಡಿದ್ದಾರೆ ಎಂಬುದು ಮೂರ್ನಾಲ್ಕು ದಿನದಲ್ಲಿ ತಿಳಿಯಲಿದೆ ಎಂದು ಅವರು ಹೇಳಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಕುರಿತು ಪರಿಶೀಲನೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಗುರುವಾರ (ಜೂ.18) ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನವಾಗಿದ್ದರ ಬಗ್ಗೆ ಪಕ್ಷ ಪರಿಶೀಲನೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಭಿನಂದಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ; ಸಮಯ ನೋಡಿಕೊಂಡು ಕ್ರಮ ಎಂದ ಎಚ್.ಡಿ.ಕುಮಾರಸ್ವಾಮಿ
ಬಿಜೆಪಿಯ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ್ ಅವರು, ಜಯಶೀಲರಾಗಿದ್ದು ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಲಿಂಗರಾಜ ಪಾಟೀಲ್ ಅವರ ಮೂರು ಮತಗಳು ಅಡ್ಡ ಮತದಾನ ಆಗಿದೆ. ರಘು ಅವರ ಮೂವತ್ತು ಮತಗಳಲ್ಲಿ ಒಂದು ಮತ ಅಸಿಂಧು ಆಗಿದೆ. ಇದನ್ನು ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂಬುದನ್ನು ಮುಂದೆ ಪರಿಶೀಲನೆ ನಡೆಸಲಾಗುವುದು ಹಾಗೂ ಸೂಕ್ತ ತೀರ್ಮಾನವನ್ನು ಪಕ್ಷ ಕೈಗೊಳ್ಳಲಿದೆ ಎಂದು ಹೇಳಿದರು.