ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (BL Santhosh) ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ನಿವಾಸಕ್ಕೆ ಶನಿವಾರ ಸೌಹಾರ್ದಯುತ ಭೇಟಿ ನೀಡಿ, ಮಾತುಕತೆ ನಡೆಸಿದರು. ಇದೇ ವೇಳೆ 50 ವರ್ಷಗಳ ಯಶಸ್ವಿ ರಾಜಕೀಯ ಪಯಣ ಪೂರೈಸಿದ ಹಿನ್ನೆಲೆಯಲ್ಲಿ ಬಿಎಸ್‌ವೈ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ಆತ್ಮೀಯರಾದ ಬಿ.ಎಲ್.ಸಂತೋಷ್ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾಗಿ ಇಡೀ ದೇಶಾದ್ಯಂತ ಪಕ್ಷದ ಸಂಘಟನೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಅವರು ಇಂದು ನಮ್ಮ ಮನೆಗೆ ಸೌಹಾರ್ದಯುತ ಭೇಟಿ ನೀಡಿ ನನ್ನೊಂದಿಗೆ ಉಪಹಾರ ಸೇವಿಸಿದರು.
ಸದ್ಯ ನಿರೀಕ್ಷೆಯಲ್ಲಿರುವ ಪಂಚರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸುವ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು. 50 ವರ್ಷಗಳ ನನ್ನ ಯಶಸ್ವಿ ರಾಜಕೀಯ ಪಯಣದ ಕುರಿತು ಆತ್ಮೀಯವಾಗಿ ಶುಭಾಶಯ ಸಲ್ಲಿಸಿದರು. ಸಂತೋಷ್ ಜೀ ಅವರ ಸಂಘಟನಾ ಸಾಮರ್ಥ್ಯ-ಚತುರತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸ್ಫೂರ್ತಿಯ ಸೆಲೆಯಾಗಿದೆ ಎಂದು ಮಾಜಿ ಸಿಎಂ ತಿಳಿಸಿದರು.
ಮೇ 9ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ; ಬಿಎಸ್‌ವೈಗೆ ಸನ್ಮಾನ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಐದು ದಶಕಗಳ ಯಶಸ್ವಿ ರಾಜಕೀಯ ಜೀವನ ಪೂರೈಸಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ವತಿಯಿಂದ ಮೇ 9ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ.
ಯಡಿಯೂರಪ್ಪನವರು 50 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದಾರೆ. ಅವರು ರೈತರಿಗಾಗಿ ಹೋರಾಟ ಮಾಡಿದ್ದಾರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಹೋರಾಟ ಮಾಡಿದ್ದಾರೆ. ಅವರ ಜೀವನ ಮತ್ತು ಸೇವೆಯನ್ನು 'ಯಡಿಯೂರಪ್ಪ ಅಭಿಮಾನೋತ್ಸವ'ವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ ಎಂದು ಸಂಸದ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.
ತಾತನಾದ ಸಂಭ್ರಮದಲ್ಲಿದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ
ಕೇಂದ್ರ ಗೃಹ ಸಚಿವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯಡಿಯೂರಪ್ಪರನ್ನು ಸನ್ಮಾನಿಸಲಿದ್ದಾರೆ. ಮೇ 8ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪರನ್ನು ಚಿತ್ರದುರ್ಗ ನಗರಕ್ಕೆ ಸ್ವಾಗತಿಸುವ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ತಿಳಿಸಿದರು. ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ಕಾರಜೋಳ ಹೇಳಿದ್ದಾರೆ.