ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BY Vijayendra: ಕಾಂಗ್ರೆಸ್‌ ನಾಯಕರ ಕುರಿತ ಆಕ್ಷೇಪಾರ್ಹ ಪದ ಬಳಕೆಗೆ ಕ್ಷಮೆಯಾಚಿಸಿದ ಬಿ.ವೈ.ವಿಜಯೇಂದ್ರ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೀಸಲಾತಿ, ಬೆಲೆ ಏರಿಕೆ ವಿಚಾರವಾಗಿ ಇತ್ತೀಚೆಗೆ ದಾವಣಗೆರೆಯಲ್ಲಿ ಮಾತನಾಡುವಾಗ, “ಈ ನನ್ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ” ಎಂದು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‌ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ಅವರು ಕ್ಷಮೆ ಕೋರಿದ್ದಾರೆ.

ಆಕ್ಷೇಪಾರ್ಹ ಪದ ಬಳಕೆ; ಕಾಂಗ್ರೆಸ್‌ಗೆ ಕ್ಷಮೆಯಾಚಿಸಿದ ಬಿ.ವೈ.ವಿಜಯೇಂದ್ರ

-

Prabhakara R
Prabhakara R Nov 3, 2026 3:18 PM

ಬೆಂಗಳೂರು: ಕಾಂಗ್ರೆಸ್ ನಾಯಕರ ಕುರಿತ ಆಕ್ಷೇಪಾರ್ಹ ಪದ ಬಳಕೆಗೆ ಭಾರೀ ಟೀಕೆಗೆ ಗುರಿಯಾಗಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra ) ಅವರು, ಕೊನೆಗೂ ತಮ್ಮ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಉದ್ದೇಶಪೂರ್ವಕವಾಗಿ ಆ ಪದವನ್ನು ಬಳಸಿಲ್ಲ, ಸಿಟ್ಟಿನಿಂದ ಆ ಪದ ಬಳಸಿದ್ದೇನೆ. ನನ್ನ ಮಾತಿನಿಂದ ಯಾರಿಗಾರೂ ನೋವಾಗಿದ್ದರೆ ಕ್ಷಮೆ ಕೇಳುವೆ ಎಂದು ತಿಳಿಸಿದ್ದಾರೆ.

ವಿಜಯೇಂದ್ರ ಅವರು ಮೀಸಲಾತಿ, ಬೆಲೆ ಏರಿಕೆ ವಿಚಾರವಾಗಿ ಇತ್ತೀಚೆಗೆ ದಾವಣಗೆರೆಯಲ್ಲಿ ಮಾತನಾಡುವಾಗ, “ಈ ನನ್ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ” ಎಂದು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‌ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ವಿಜಯೇಂದ್ರ ಅವರು ಮೂರು ದಿನದೊಳಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ತಮ್ಮ ಮಾತಿಗೆ ಕ್ಷಮೆ ಕೇಳುವ ಮೂಲಕ ವಿವಾದ ತಣ್ಣಗಾಗಿಸಲು ಮುಂದಾಗಿದ್ದಾರೆ.

ವಿಜಯೇಂದ್ರ ಅವರ ಆಕ್ಷೇಪಾರ್ಹ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದರು. ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರೊಬ್ಬರು ಇಂತಹ ಅಸಂಸದೀಯ ಭಾಷೆ ಬಳಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಪಾಳೆಯ ಕೆಂಡಾಮಂಡಲವಾಗಿತ್ತು. ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಅವರ ಬೆಂಗಳೂರಿನ ನಿವಾಸದ ಸುತ್ತಮುತ್ತ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ಹೊರಹಾಕಿದ್ದರು. ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಪಟ್ಟುಹಿಡಿದು ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನಗಳೂ ನಡೆದಿದ್ದವು. ಇದರ ಬೆನ್ನಲ್ಲೇ ವಿಜಯೇಂದ್ರ ಅವರು ಕ್ಷಮೆಯಾಚಿಸಿರುವುದು ಕಂಡುಬಂದಿದೆ.