ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BY Vijayendra: ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಅಭಿನಂದಿಸಿದ ಬಿ.ವೈ. ವಿಜಯೇಂದ್ರ

Nitin Nabin: ನಿತಿನ್ ನಬೀನ್‍ ಅವರು ಪ್ರಸ್ತುತ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ನೂತನ ಕಾರ್ಯಾಧ್ಯಕ್ಷ ನಿತಿನ್ ನಬೀನ್‌ರನ್ನು ಅಭಿನಂದಿಸಿದ ಬಿ.ವೈ. ವಿಜಯೇಂದ್ರ.

ದೆಹಲಿ, ಡಿ.17: ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ನಿತಿನ್ ನಬೀನ್ (Nitin Nabin) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra), ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬುಧವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ‘ಯುವ ಸಮೂಹʼಸಂಘಟನೆಯ ಬಹುದೊಡ್ಡ ಶಕ್ತಿ, ಈ ನಿಟ್ಟಿನಲ್ಲಿ ಯುವ ಉತ್ಸಾಹಿಗಳನ್ನು ಗುರುತಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆ ಹಾಗೂ ಬದ್ಧತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರೂ ಆದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಇತರ ವರಿಷ್ಠರು ಯುವ ನಾಯಕ ನಿತಿನ್ ನಬೀನ್ ಅವರನ್ನು ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶದ ಯುವ ಜನರಿಗೆ ಸ್ಫೂರ್ತಿಯ ಸಂದೇಶ ರವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.‌

ಸಮರ್ಪಕವಾಗಿ ಒಳಮೀಸಲಾತಿ ಜಾರಿಗೊಳಿಸದಿದ್ರೆ ಸರ್ಕಾರ ಕಿತ್ತೊಗೆಯುವ ಸಂಕಲ್ಪ: ಎ. ನಾರಾಯಣಸ್ವಾಮಿ

ಬಿಜೆಪಿ, ಇತಿಹಾಸದಲ್ಲಿ ಅತ್ಯುನ್ನತ ಜವಾಬ್ದಾರಿ ವಹಿಸಿಕೊಂಡ ಯುವ ನಾಯಕ ಎಂಬ ಹೆಗ್ಗಳಿಕೆಗೆ ನಿತಿನ್ ನಬೀನ್ ಪಾತ್ರರಾಗಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಪಕ್ಷ ನಿಷ್ಠ, ಕ್ರಿಯಾಶೀಲತೆ, ರಾಷ್ಟ್ರಬದ್ಧತೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಸಮರ್ಥವಾಗಿ ನಿರೂಪಿಸಿದ್ದಾರೆ. ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಹಾರದಲ್ಲಿ ಅಪಾರ ಜನಮನ್ನಣೆ ಗಳಿಸಿದ ಜನನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದ್ದಾರೆ. ನಿತಿನ್ ನಬೀನ್‍ ಅವರು ಪ್ರಸ್ತುತ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.