BY Vijayendra: ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿ.ವೈ.ವಿಜಯೇಂದ್ರ
BY Vijayendra: ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.


ಬಾಗಲಕೋಟೆ: ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಪ್ರಶ್ನಿಸಿದ್ದಾರೆ. ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಮಾತನಾಡಿ, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ ಎಂದು ಆರೋಪಿಸಿದರು.
ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರ್ಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‌ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ ಎಂದು ಟೀಕಿಸಿದರು. ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಳಿದರು.
ಮುಸಲ್ಮಾನರಿಗೆ ಸರ್ಕಾರಿ ಕಾಮಗಾರಿಯಲ್ಲಿ ಶೇ. 4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ? ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ. ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಕೇಳಿದರು.
ಈ ಸುದ್ದಿಯನ್ನೂ ಓದಿ | Dodda Alada Mara: ಬೆಂಗಳೂರಿನಲ್ಲಿದೆ ದೇಶದ 4ನೇ ದೊಡ್ಡ ಆಲದ ಮರ; ಪ್ರಕೃತಿಪ್ರಿಯರು ಭೇಟಿ ನೀಡಲೇಬೇಕಾದ ಜಾಗ ಇದು
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಗದ್ದೀಗೌಡರ್, ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ. ಭಾಂಡಗೆ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ, ಪಿ.ಎಚ್. ಪೂಜಾರ, ಶಾಸಕ ಜಗದೀಶ್ ಗುಡಗಂಟಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಜಿ. ಪಾಟೀಲ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಎ.ಎಚ್. ಪಾಟೀಲ್ ನಡಹಳ್ಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬಾಗಲಕೋಟೆ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.