ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Indira Food Kit: ಅನ್ನಭಾಗ್ಯ ಯೋಜನೆ; 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆಗೆ ಸಂಪುಟ ನಿರ್ಧಾರ

Anna Bhagya Scheme : ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಕಾರ್ಡ್‌ಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಇತರ ಆಹಾರ ಸಾಮಗ್ರಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇಂದಿರಾ ಆಹಾರ ಕಿಟ್‌ನಲ್ಲಿ (Indira Food Kit) ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಇರಲಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ʼಇಂದಿರಾ ಆಹಾರ ಕಿಟ್‌ʼ ವಿತರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಸದ್ಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ನುಮುಂದೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಇತರ ಆಹಾರ ಸಾಮಗ್ರಿ ನೀಡಲಾಗುತ್ತದೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್‌ಗಳನ್ನು (ಪೌಷ್ಟಿಕ ಆಹಾರ ಕಿಟ್- ತೊಗರಿ ಬೇಳೆ 2 ಕೆಜಿ, ಅಡುಗೆ ಎಣ್ಣೆ 1 ಕೆಜಿ, ಸಕ್ಕರೆ 1 ಕೆಜಿ, ಉಪ್ಪು 1 ಕೆಜಿ.) ರೂ.61.19 ಕೋಟಿಗಳ ಮೊತ್ತದಲ್ಲಿ ವಿತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ಈ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಇಂದಿರಾ ಆಹಾರ ಕಿಟ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್‌ ಅನ್ನು ಒದಗಿಸಲು ಬಜೆಟ್‌ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 12 ದಿನ ಋತುಚಕ್ರ ರಜೆ; ಕ್ಯಾಬಿನೆಟ್ ಅನುಮೋದನೆ

ಬೆಂಗಳೂರು, ಅ. 09: ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ಋತು ಚಕ್ರ ರಜೆ (Menstrual leave) ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಮಹಿಳಾ ಉದ್ಯೋಗಿಗಳಿಗೆ ವರ್ಷದಲ್ಲಿ 12 ದಿನ ವೇತನ ಸಹಿತ ರಜೆ ಸಿಗಲಿದೆ.

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಕಂಪನಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ಯಾವ ದಿನ ರಜೆ ಪಡೆಬೇಕು ಎಂಬುವುದನ್ನು ಹೆಣ್ಣುಮಕ್ಕಳು ತೀರ್ಮಾನ ಮಾಡಬಹುದಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಸಂತೋಷ್‌ ಲಾಡ್ ಅವರು, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ನೀಡಲಾಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಆದಷ್ಟೂ ಬೇಗ ಕಾಯ್ದೆ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | DK Shivakumar: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ಖಂಡಿಸಬೇಕು: ಡಿ.ಕೆ.ಶಿವಕುಮಾರ್

ಈಗಾಗಲೇ ಬಿಹಾರ, ಕೇರಳ, ಒಡಿಶಾ, ಸಿಕ್ಕಿಂ ರಾಜ್ಯಗಳಲ್ಲಿ ಋತು ಚಕ್ರ ರಜೆ ನೀಡಲಾಗುತ್ತಿದೆ. 1992ರಲ್ಲಿ ಬಿಹಾರವು ದೇಶದಲ್ಲಿ ಮೊದಲ ಬಾರಿಗೆ ಮಹಿಳಾ ಉದ್ಯೋಗಿಗಳಿಗೆ ಋತು ಚಕ್ರ ರಜೆ ನೀತಿ ಜಾರಿ ಮಾಡಿತ್ತು.