Chalavadi Narayanaswamy: ಗುತ್ತಿಗೆ ಶುಶ್ರೂಷಾಧಿಕಾರಿಗಳ ಬೇಡಿಕೆ ಸದನದಲ್ಲಿ ಪ್ರಸ್ತಾಪ: ಛಲವಾದಿ ನಾರಾಯಣಸ್ವಾಮಿ
Chalavadi Narayanaswamy: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ಹೋರಾಟ ನಡೆಸುತ್ತಿರುವ ಶುಶ್ರೂಷಾಧಿಕಾರಿಗಳ ನೋವಿನಲ್ಲಿ ನನಗೂ ಪಾಲಿದೆ. ನಿಮ್ಮ ಹೋರಾಟದಲ್ಲಿ ನಾನೂ ಜತೆಗೂಡುವೆ. ಸದನದಲ್ಲಿ ನಿಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ.

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ (State Congress Government) ಪಾಪದ ಕೊಡ ತುಂಬಿದೆ. ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ಅದು ತಲುಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಟೀಕಿಸಿದರು. ನಗರದ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ಹೋರಾಟ ನಡೆಸುತ್ತಿರುವ ಶುಶ್ರೂಷಾಧಿಕಾರಿಗಳ ನೋವಿನಲ್ಲಿ ನನಗೂ ಪಾಲಿದೆ. ನಿಮ್ಮ ಹೋರಾಟದಲ್ಲಿ ನಾನೂ ಜತೆಗೂಡುವೆ. ಸದನದಲ್ಲಿ ನಿಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ನಿಮ್ಮ ಸದಸ್ಯನ ರೂಪದಲ್ಲಿ ಅಲ್ಲಿ ಹೋರಾಟ ಮಾಡುತ್ತೇನೆ. ಸಂಸದ ಡಾ. ಮಂಜುನಾಥ್ ಅವರಿಂದ ನಿಮ್ಮ ಬೇಡಿಕೆಗಳ ಕುರಿತಂತೆ ವಿವರ ಪಡೆದುಕೊಳ್ಳುವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಜತೆ ಮಾತನಾಡುವೆ. ಆರೋಗ್ಯ ಸಚಿವರ ಆರೋಗ್ಯ ಸರಿಯಾದರೆ ಅವರ ಜತೆಗೂ ಮಾತನಾಡುವೆ ಎಂದು ತಿಳಿಸಿದರು. ಅವರು ವೈದ್ಯರೇನೂ ಅಲ್ಲ. ಆರೋಗ್ಯ ಸಚಿವರಾಗುವ ಯೋಗ್ಯತೆ ಅವರಲ್ಲಿಲ್ಲ ಎಂದು ಆರೋಪಿಸಿದ ಅವರು, ದನಗಳಿಗೆ ಕೊಡುವ ಔಷಧಿಯನ್ನೂ ಜನರಿಗೆ ಕೊಡುತ್ತಿದ್ದಾರೆ. ಕಳಪೆ ಔಷಧಿ ಖರೀದಿಸುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು ದೂರಿದರು.
ಈ ಸುದ್ದಿಯನ್ನೂ ಓದಿ | Karnataka Weather: ಕರಾವಳಿಯಲ್ಲಿ ಇನ್ನೆರಡು ದಿನ ಬಿಸಿ ಗಾಳಿ ಎಚ್ಚರಿಕೆ; ಬಿಸಿಲಿನ ಬೇಗೆಯಿಂದ ರಕ್ಷಣೆಗೆ ಮಾರ್ಗಸೂಚಿ ಪ್ರಕಟ
ಸಂಸದ ಡಾ. ಮಂಜುನಾಥ್ ಮಾತನಾಡಿ, ನಾವು ನಿಮ್ಮ ಜತೆ ಇದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿಸುವುದು, ಖಾಯಂ ಮಾಡುವ ಬಗ್ಗೆ ಒತ್ತಾಯಿಸುತ್ತೇವೆ. ನರ್ಸ್‍ಗಳು, ತಂತ್ರಜ್ಞರು ಸೇರಿ ವೈದ್ಯೇತರ ಸಿಬ್ಬಂದಿ ಅತ್ಯಂತ ಅನಿವಾರ್ಯ ಎಂದು ತಿಳಿಸಿದರು.