ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ; ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

CM DK Shivakumar: ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರು, ಆ.01: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ ಎಂದು ಸಿಎಂ ಡಿ.ಕೆ. ಶಿವಕುಮಾರ್ (CM DK Shivakumar), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಶನಿವಾರ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವೇಕಾನಂದರ ತ್ಯಾಗ ನಮಗೆ ಸ್ಫೂರ್ತಿಯಾಗಬೇಕಿದೆ. ಅವರ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ರಮ ಯುವ ಕ್ರಾಂತಿಯ ಐತಿಹಾಸಿಕ ಘಳಿಗೆಯಾಗಿದೆ. ನೀವು ಸೋತಾಗ ಧೈರ್ಯವಾಗಿರಿ, ನೀವು ಗೆದ್ದಾಗ ಹೃದಯ ವೈಶಾಲ್ಯತೆ ಹೊಂದಿರಬೇಕು ಎಂದು ವಿವೇಕಾನಂದ ಅವರು ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಒಟ್ಟಾಗಿ ಕೆಲಸ ಮಾಡೋಣ

ನಮ್ಮಲ್ಲಿರುವ ಹವಾಮಾನ, ಸಂಸ್ಕೃತಿ ನಮ್ಮ ಶಕ್ತಿ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದು ನಮ್ಮ ರಾಜ್ಯ ನಿಮ್ಮ ಜತೆಗೆ ನಿಲ್ಲುತ್ತದೆ. ನಾವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಸಂಕಲ್ಪ ಭೂಮಿ

ಇದು ಸಂಕಲ್ಪ ಭೂಮಿ. ವಿವೇಕಾನಂದರು ಮೈಸೂರಿನಿಂದ ವಿದೇಶಕ್ಕೆ ಪ್ರಯಾಣ ಮಾಡುವಾಗ ಜೇಮ್ ಷೆಡ್ ಜೀ ಟಾಟಾ ಅವರಿಗೆ ಒಂದು ಮಾತು ಹೇಳಿದ್ದರು. ಇದು ಬಡ ರಾಷ್ಟ್ರ ಇಲ್ಲಿ ವಿಜ್ಞಾನ ಸಂಸ್ಥೆಗಳು ಆರಂಭವಾಗಬೇಕು ಎಂದು ಹೇಳಿದರು. ನಂತರ ಟಾಟಾ ಅವರು ಮಹಾರಾಜರಿಗೆ ಈ ವಿಚಾರ ತಿಳಿಸಿದರು. ನಂತರ ಮಹಾರಾಜರು ಬೆಂಗಳೂರಿನಲ್ಲಿ 300 ಎಕರೆ ಜಾಗ ನೀಡಿದರು. ಅಲ್ಲೇ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಪ್ರಾರಂಭ ಮಾಡಲಾಗಿದೆ. ಇದು ಈ ದೇಶದ ವಿಜ್ಞಾನಕ್ಕೆ ಮೈಸೂರು ಮಹಾರಾಜರ ಕೊಡುಗೆ ಎಂದು ಹೇಳಿದರು.

ವಿವೇಕಾನಂದರ ಆಲೋಚನೆಯೇ ನಮ್ಮ ಸರ್ಕಾರದ ಆಲೋಚನೆ

ಇದು ಐತಿಹಾಸಿಕ ಕಾರ್ಯಕ್ರಮ. ಯುವಶಕ್ತಿ, ಯುವ ಆಲೋಚನೆ, ಯುವ ಚಿಂತನೆ. ನಾನು ನನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದ್ದೆ. ಈ ಹೊಸ ಚಿಂತನೆ ಬದಲಾವಣೆಯ ಆರಂಭ, ಯುವಕರ ಕನಸು, ದೇಶದ ಕನಸು ಎಂದರು.

ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ನಮ್ಮ ಯುವಕರನ್ನು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಯುವಕರ ಮಾನಸಿಕ ಹಾಗೂ ದೈಹಿಕ ಶಕ್ತಿ ವೃದ್ಧಿಗೆ ಕೆಲಸ ಮಾಡಬೇಕಿದೆ. ಮೈಸೂರು ಇತಿಹಾಸ, ವಿಶ್ವದ ಇತಿಹಾಸ. ವಿವೇಕಾನಂದ ಅವರು 1893ರಲ್ಲಿ ಮೈಸೂರಿನಿಂದ ಹೆಜ್ಜೆ ಹಾಕಿ, ಮಹಾರಾಜರ ಪ್ರೋತ್ಸಾಹದಿಂದ ವಿದೇಶಕ್ಕೆ ಹೋಗಿ ನನ್ನ ಸಹೋದರ, ಸಹೋದರಿಯರೇ ಎಂದು ಭಾಷಣ ಮಾಡಿ ವಿಶ್ವದ ಗಮನ ಸೆಳೆದಿದ್ದರು. ಅವರಿಗೆ ಸಹಕಾರ ಕೊಟ್ಟ ಮಹಾರಾಜರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸ್ಮರಿಸಿದರು.‌

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು ಎಂದ ಸಿಎಂ ಡಿ.ಕೆ. ಶಿವಕುಮಾರ್

ವಿವೇಕಾನಂದ ಸಾಂಸ್ಕೃತಿಕ ಕೇಂದ್ರವನ್ನು ಅನಾವರಣ ಮಾಡಿದ್ದಾರೆ. ಇದು ದೇಶದ ಆಸ್ತಿ. ದೇಶದ ಯುವಕರನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಲು ಕಾರ್ಯಕ್ರಮ ರೂಪಿಸಿದ್ದಾರೆ. ಈ ಸಂಸ್ಥೆಗೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಮ್ಮ ಭಾಗ್ಯ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.