ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ (Bangalore's IT companies) ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ (ignoring Kannadigas) ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಐಟಿ ಕಂಪನಿಗಳಲ್ಲಿ ಕನ್ನಡಿಗರ ಕಡೆಗಣನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.
ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಕನ್ನಡ ಮಾತೃಭಾಷೆ ಎಂದಿದ್ದಕ್ಕೆ ಉದ್ಯೋಗ ನಿರಾಕರಣೆ; ಯುವತಿ ಆರೋಪ
ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಯುವತಿಯೊಬ್ಬಳು ತನ್ನ ಮಾತೃಭಾಷೆ ಕನ್ನಡ ಎಂದು ಹೇಳಿದ್ದಕ್ಕೆ ಉದ್ಯೋಗ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬೆಂಗಳೂರಿನ Esthenos Technologies Pvt. Ltd. ಕಂಪನಿಯ ರೆಸ್ಯೂಮ್ನಲ್ಲಿ ಕನ್ನಡ ಭಾಷೆಗೆ ಮಾನ್ಯತೆ ನೀಡುತ್ತಿಲ್ಲ ಹಾಗೂ ರೆಸ್ಯೂಮ್ನಲ್ಲಿ ಕನ್ನಡ ಭಾಷೆಯನ್ನು ಉಲ್ಲೇಖಿಸಿದ ಕಾರಣಕ್ಕೆ ಉದ್ಯೋಗ ನಿರಾಕರಿಸಲಾಗಿದೆ ಎಂದು ಯುವತಿ ವಿಡಿಯೊ ಮೂಲಕ ಹೇಳಿದ್ದರು.
ತಮಿಳು ಮತ್ತು ತೆಲುಗು ಭಾಷೆಗಳಿಗೆ ಮಾನ್ಯತೆ ನೀಡಿ, ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್ ಇಂಟರ್ವ್ಯೂಗಳನ್ನು ನಡೆಸದೆ, ಕಡಿಮೆ ಸಂಬಳಕ್ಕೆ ಕೆಲಸ ಮಾಡಲು ಸಿದ್ಧರಿರುವವರನ್ನು ಹೊರಗಿನಿಂದ ಕರೆತರುವುದರಿಂದ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಬೇನಾಮಿ ಕಂಪನಿಗೆ ರಾಜ್ಯ ಸರ್ಕಾರದಿಂದ 133 ಕೋಟಿ ರೂಪಾಯಿ ಟೆಂಡರ್: ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ
ಬೆಂಗಳೂರಿನಲ್ಲೇ ಕನ್ನಡ ಭಾಷೆಗೆ ಈ ರೀತಿಯ ಪರಿಸ್ಥಿತಿ ಎದುರಾಗುತ್ತಿರುವುದು ಸರಿಯೇ? ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಯುವತಿಯು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.