ಶಾಮನೂರು ಶಿವಶಂಕರಪ್ಪ ಹೆಸರು ಚಿರಸ್ಥಾಯಿ ಆಗಿಸಲು ಸಿಎಂ ಕ್ರಮವಹಿಸಲಿ: ಬಿ.ವೈ. ವಿಜಯೇಂದ್ರ
Shamanur Shivashankarappa: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಬಂದಾಗಲೂ ಪಕ್ಷವನ್ನು ಮರೆತು ಸಮಾಜ ಒಗ್ಗೂಡಿಸುವ ಕೆಲಸ ಅವರ ನೇತೃತ್ವದಲ್ಲಿ ಆಗಿತ್ತು. ಅವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಗೌರವ ಸಲ್ಲಿಸಿದ ಬಿ.ವೈ. ವಿಜಯೇಂದ್ರ. -
ದಾವಣಗೆರೆ, ಡಿ.15: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ (Shamanur Shivashankarappa) ನಿಧನದಿಂದ ನಾಡಿಗೆ ಹಾಗೂ ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದರು. ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಗೌರವ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳ ಜತೆ ಸೋಮವಾರ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ರಾಜಕೀಯ ಕ್ಷೇತ್ರದ ಜತೆಜತೆಗೆ ಶಿಕ್ಷಣ ಕ್ಷೇತ್ರದಲ್ಲಿ ಯಾವ ರೀತಿ ತಮ್ಮ ಸೇವೆ ಸಲ್ಲಿಸಿದ್ದಾರೆ, ವೀರಶೈವ ಸಮಾಜವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಯಾವ ರೀತಿ ಅವರ ಕೊಡುಗೆ ಇದೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಹೇಳಿದರು.
ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಬಂದಾಗಲೂ ಪಕ್ಷವನ್ನು ಮರೆತು ಸಮಾಜ ಒಗ್ಗೂಡಿಸುವ ಕೆಲಸ ಅವರ ನೇತೃತ್ವದಲ್ಲಿ ಆಗಿತ್ತು. ಅವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ತಿಳಿಸಿದರು. ಅವರ ಕುಟುಂಬದ ಸದಸ್ಯರು, ನಾಡಿನ ಜನತೆ, ಸಮಾಜದ ಎಲ್ಲರಿಗೂ ನೋವನ್ನು ತಡೆಯುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು. ಶಾಮನೂರು ಶಿವಶಂಕರಪ್ಪ ಅವರ ಹೆಸರು ಚಿರಸ್ಥಾಯಿಯಾಗಿ ಇರುವಂತೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮನವಿ ಮಾಡಿದರು.
5 ದಶಕಗಳ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಸೋಲು ಕಂಡಿದ್ದ ಶಾಮನೂರು ಶಿವಶಂಕರಪ್ಪ!
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರ
ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur shivashankarappa) ಅವರ ಅಂತ್ಯ ಸಂಸ್ಕಾರ ನಗರದಲ್ಲಿ ಸೋಮವಾರ ಸಂಜೆ ನೆರವೇರಿತು. ಇಲ್ಲಿನ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಕುಟುಂಬಸ್ಥರು ಸೇರಿ ಸಾವಿರಾರು ಜನರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಪಂಚಪೀಠಗಳ ಜಗದ್ಗುರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿತು. ಪಾರ್ಥಿವ ಶರೀರಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿ ಮೂವರು ಪುತ್ರರು ಪೂಜೆ ಸಲ್ಲಿಸಿದರು. ನಂತರ ವಿಭೂತಿ, ಬಿಲ್ವಪತ್ರೆ, ಗಂಗಾಜಲ ಹಾಕಿ ಕ್ರಿಯಾಸಮಾಧಿ ಮಾಡಲಾಯಿತು. ಅಂತ್ಯಕ್ರಿಯೆಗೆ ಜಿಲ್ಲೆ ಸೇರಿ ವಿವಿಧೆಡೆಯಿಂದ ಜನಸಾಗರವೇ ಹರಿದು ಬಂದಿತ್ತು.
ಪಾರ್ಥಿವ ಶರೀರ ಬೆಂಗಳೂರಿನಿಂದ ದಾವಣಗೆರೆಗೆ ತೆಗೆದುಕೊಂಡು ಬರುತ್ತಿದ್ದಂತೆ ರಾಜ್ಯದ ಪ್ರಮುಖ ಮಠಾಧೀಶರು ಹಾಗೂ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ದರ್ಶನ ಪಡೆದರು.
92ನೇ ಇಳಿ ವಯಸ್ಸಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಶಾಮನೂರು ಶಿವಶಂಕರಪ್ಪ
ಮನೆಯ ಆವರಣದಲ್ಲಿ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರು ಅಂತಿಮ ನಮನ ಸಲ್ಲಿಸಿದರು.