ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್‌ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ

Profile Siddalinga Swamy May 24, 2025 2:29 PM

ಮೈಸೂರು: ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು. ಹಿನಕಲ್‌ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಜನಾರ್ಪಣೆಗೊಳಿಸಿ, ಬಳಿಕ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ ಎಂದು ತಿಳಿಸಿದರು.

ಹೊಸದಾಗಿ 184 ಕ್ಯಾಂಟೀನ್‌ ಆರಂಭ

2017 ರಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್‌ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ಹೊಸದಾಗಿ ಇನ್ನೂ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಹೇಳಿದರು. ‌

ಈ ಸುದ್ದಿಯನ್ನೂ ಓದಿ | Monsoon in Kerala : 24 ಗಂಟೆಯೊಳಗೆ ಕೇರಳಕ್ಕೆ ಮಾನ್ಸೂನ್‌ ಎಂಟ್ರಿ; 16 ವರ್ಷದಲ್ಲಿ ಇದೇ ಮೊದಲು ಇಷ್ಟು ಬೇಗ ಮುಂಗಾರು !

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್‌ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.