ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಹೈಕಮಾಂಡ್‌ ಅಂತೆ! ಹೀಗಂದಿದ್ದು ಯಾರು ಗೊತ್ತಾ?

ಶಿಡ್ಲಘಟ್ಟ ಕ್ಷೇತ್ರಕ್ಕೆ ಶಾಸಕ ರವಿಕುಮಾರ್ (JDS MLA Ravikumar) ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ಪರ ಬ್ಯಾಟಿಂಗ್ ಮಾಡಿದ್ದು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಹೈಕಮ್ಯಾಂಡ್ ಇದ್ದಂತೆ, ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಹೈಕಮಾಂಡ್‌ ಅಂತೆ!

Profile Rakshita Karkera Mar 23, 2025 8:34 AM

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಭುಗಿಲೆದ್ದಿರುವ ಹನಿಟ್ರ್ಯಾಪ್ (Honeytrap) ಪ್ರಕರಣ ಸಿಎಂ ಬದಲಾವಣೆಗೆ ಕಾರಣವಾಗುತ್ತಾ ಎಂಬ ಮಾತುಗಳು ಕೇಳಿಬರುತ್ತಿದೆ. ಮತ್ತೊಂದೆಡೆ ಜೆಡಿಎಸ್ ವರಿಷ್ಠ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ಆಗಾಗ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಈ ಎಲ್ಲದರ ನಡುವೆ ಜೆಡಿಎಸ್‌ ಶಾಸಕರೊಬ್ಬರು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಹೈಕಮಾಂಡ್‌ ಇದ್ದಂತೆ ಎಂದು ಹಾಡಿಹೊಗಳಿದ್ದಾರೆ. ಶಿಡ್ಲಘಟ್ಟ ಕ್ಷೇತ್ರಕ್ಕೆ ಶಾಸಕ ರವಿಕುಮಾರ್ (JDS MLA Ravikumar) ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ಪರ ಬ್ಯಾಟಿಂಗ್ ಮಾಡಿದ್ದು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಹೈಕಮ್ಯಾಂಡ್ ಇದ್ದಂತೆ, ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್ ವಿಚಾರ ಸದನದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಅಧಿಕಾರ ಹಂಚಿಕೆ ವಿಚಾರಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಲಾಗಿದೆ. ಹನಿಟ್ರ್ಯಾಪ್ ವಿಚಾರ ಗುರುವಾರ, ಶುಕ್ರವಾರ ಬಹಳಷ್ಟು ಚರ್ಚೆ ಆಗಿದೆ. ರಾಜ್ಯದಲ್ಲಿ 2028 ರವರೆಗೂ ಸಿಎಂ ಬದಲಾವಣೆ ಮಾಡಲು ಸಾಧ್ಯವಿಲ್ಲಾ ಎಂದಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು ದೇಶದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಅಂತಾ ಏನಾದ್ರು ಇದ್ರೆ ಅದು ಸಿದ್ದರಾಮಣ್ಣ ಮಾತ್ರ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಹೈಕಮಾಂಡ್‌ ಅಂತಾರೇ. ಆದರೆ, ನನ್ನ ಪ್ರಕಾರ ಹೈಕಮಾಂಡ್‌ ಸಿದ್ದರಾಮಣ್ಣ ಮಾತ್ರ ಎಂದು ಹೇಳಿದ್ದಾರೆ.

Honey Trap: ನಲುವತ್ತಲ್ಲ, 400 ಜನರಿಗೆ ಹನಿಟ್ರ್ಯಾಪ್‌: ಸಚಿವ ಸತೀಶ್‌ ಜಾರಕಿಹೊಳಿ ಬಾಂಬ್

ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಹೊತ್ತಿನಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ನಡೆಸಿದರೆ, ಇನ್ನೂ ಕೆಲವರು ಡಿಕೆ ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡ್ತಾ ಇದ್ದಾರೆ. ಆದ್ರೆ, ಈ ನಡುವೆ ಬಿಜೆಪಿಯ ಕೆಲ ಶಾಸಕರು ಹಾಗೂ ಜೆಡಿಎಸ್ ಶಾಸಕರು ಕೂಡ ಸಿಎಂ ಸಿದ್ದರಾಮಯ್ಯ ಪರವಾಗಿ ಹೇಳಿಕೆ ನೀಡುತ್ತಿರುವುದು ಬಹಳ ವಿಶೇಷ

ಕಳೆದ ಕೆಲವು ವಾರಗಳಿಂದ ರಾಜ್ಯದಲ್ಲಿ ಹನಿಟ್ರ್ಯಾಪ್‌ ವಿಚಾರ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಪ್ರಮುಖವಾಗಿ ಹಿರಿಯ ಸಚಿವ ಕೆಎನ್ ರಾಜಣ್ಣ ಅವರು, ಅಧಿವೇಶನದಲ್ಲಿ ತಮ್ಮ ಮೇಲೆ ಹನಿಟ್ರ್ಯಾಪ್ ಪಯತ್ನ ನಡೆದಿತ್ತು ಎಂಬ ಸ್ಫೋಟಕ ಹೇಳಿಕೆ ನೀಡಿದ ಬಳಿಕ ಈ ವಿಚಾರ ಇನ್ನಷ್ಟು ಚರ್ಚೆಗೆ ಕಾರಣವಾಯಿತು. ಇನ್ನು ಈ ಸಂಗತಿ ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕಾರಣವಾಗಬಹುದೆಂದು ಹಲವರ ರಾಜಕೀಯ ಲೆಕ್ಕಾಚಾರವಾಗಿದೆ.