CM Siddaramaiah: ನಮ್ಮ ಸರ್ಕಾರ ʼಬಂಡೆʼಯಂತೆ ಐದು ವರ್ಷ ಭದ್ರವಾಗಿರುತ್ತದೆ-ಸಿದ್ದರಾಮಯ್ಯ
CM Siddaramaiah: ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಹೇಳಿದ್ದಾರೆ.


ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ.ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ (CM Siddaramaiah) ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿದ ಅವರು, ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.
ಈ ಸುದ್ದಿಯನ್ನೂ ಓದಿ | Nandi hills: ನಂದಿ ಬೆಟ್ಟ, ಸ್ಕಂದಗಿರಿಗೆ ಮೂರು ದಿನ ಪ್ರವಾಸಿಗರು, ಚಾರಣಿಗರಿಗೆ ನಿರ್ಬಂಧ