CM Siddaramaiah: ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಇಲ್ಲ- ಸಿಎಂ ಘೋಷಣೆ
CM Siddaramaiah: ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
 
                                -
 Siddalinga Swamy
                            
                                May 28, 2025 3:56 PM
                                
                                Siddalinga Swamy
                            
                                May 28, 2025 3:56 PM
                            ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಪುರಸ್ಕರಿಸಿ ಮಾತನಾಡಿದ ಅವರು, ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.
ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.
ಸಿಎಂ ಮಹತ್ವದ ಘೋಷಣೆ
ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಸುದ್ದಿಯನ್ನೂ ಓದಿ | CM Siddaramaiah: ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ
