COVID vaccine: ಕೋವಿಡ್ ಲಸಿಕೆ ಅಡ್ಡ ಪರಿಣಾಮದಿಂದ ಹಠಾತ್ ಸಾವು; ಅಧ್ಯಯನಕ್ಕೆ ಸಮಿತಿ ರಚನೆ
COVID vaccine: ಕೋರೊನಾ ಕಾಲದ ನಂತರದಿಂದ ಎಳೆಯ ವಯಸ್ಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ. ಹೀಗಾಗಿ ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
![Siddaramaiah (14)](https://cdn-vishwavani-prod.hindverse.com/media/images/Siddaramaiah_14.max-1280x720.jpg)
![Profile](https://vishwavani.news/static/img/user.png)
ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ (COVID vaccine) ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೊರೊನಾ ಕಾಲದ ನಂತರದಿಂದ ಎಳೆಯ ವಯಸ್ಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ. ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು.
ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು. ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ.
— Siddaramaiah (@siddaramaiah) February 7, 2025
ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ… pic.twitter.com/2Oonsg1l7U
ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸೂಚನೆ
ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಇ-ಮೇಲ್ ಮೂಲಕ, ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿದ್ದರು. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿದ್ದಾರೆ.
ಆದ್ದರಿಂದ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | BY Vijayendra: ಸಿದ್ದರಾಮಯ್ಯನವರನ್ನು ಹೈಕೋರ್ಟ್ ಆರೋಪ ಮುಕ್ತರನ್ನಾಗಿ ಮಾಡಿಲ್ಲ- ವಿಜಯೇಂದ್ರ
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ತನಿಖೆ ಸಿಬಿಐಗೆ ಇಲ್ಲ
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ (MUDA Case, muda scam) ಸಂಬಂಧಿಸಿ ನಡೆಯುತ್ತಿರುವ ವಿಚಾರಣೆಯಲ್ಲಿ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ನ (Karnataka high court) ಧಾರವಾಡ ಪೀಠ ಇಂದು ಪ್ರಕಟಿಸಿದೆ. ಪ್ರಕರಣದ ವಿಚಾರಣೆಯನ್ನು ಸಿಬಿಐಗೆ (CBI Enquiry) ಒಪ್ಪಿಸಬೇಕು ಎಂಬ ದೂರುದಾರರ ಕೋರಿಕೆಯನ್ನು ಮಾನ್ಯ ಮಾಡಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaih) ಅವರಿಗೆ ಮಹತ್ವದ ನ್ಯಾಯಾಂಗದ ಜಯ ದೊರೆತಿದೆ.
ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿ ಇಂದು ಬೆಳಗ್ಗೆ ತೀರ್ಪು ನೀಡಿತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇತ್ತೀಚೆಗೆ ಲೋಕಾಯುಕ್ತ ಸಂಸ್ಥೆ ಮುಡಾ ಕೇಸ್ ಬಗ್ಗೆ ತನಿಖೆ ನಡೆಸಿ ಸಿಎಂ ಅವರಿಗೆ ಕ್ಲೀನ್ ಚಿಟ್ ನೀಡಿತ್ತು.
ತೀರ್ಪು ಪ್ರಕಟವಾಗುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು.
ಈ ನಡುವೆ ಪ್ರಕರಣದ ಕುರಿತ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡುಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು, ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತನಿಖೆ ವೇಳೆ ಕಂಡು ಬಂದಿದೆ. ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗುವುದು ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಮುಡಾ ಹಗರಣ ಸಂಬಂಧ ಮತ್ತೊಂದೆಡೆ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದ್ದು, ಇಂದು ತೀರ್ಪು ಬರಲಿದೆ.
ಇದನ್ನೂ ಓದಿ: Benami Property: ಸಿಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಗಳಿಕೆ ಆರೋಪ; ಲೋಕಾಯುಕ್ತಕ್ಕೆ ದೂರು