ವಿಧಾನ ಪರಿಷತ್‌ನ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ಬಿ.ವೈ. ವಿಜಯೇಂದ್ರ ವಿಶ್ವಾಸ
BY Vijayendra: ರಾಜ್ಯದ ವಿಧಾನ ಪರಿಷತ್‌ನ 4 ಕ್ಷೇತ್ರಗಳಲ್ಲೂ ನಮ್ಮ ಎನ್‍ಡಿಎ ಅಭ್ಯರ್ಥಿಗಳು ಗೆದ್ದೇಗೆಲ್ಲುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ. ನಾವು ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆ ಗೆಲ್ಲಲೇಬೇಕೆಂಬ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
-
ಬೆಂಗಳೂರು, ಅ.05: ರಾಜ್ಯದ ವಿಧಾನ ಪರಿಷತ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಕೆ.ಎಂ. ಸುರೇಶ್, ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎ.ಪಿ.ರಂಗನಾಥ್ ಅವರು ಸೋಮವಾರ ಲಾಲ್ ಬಾಗ್ ಬಳಿಯಿಂದ ಪಾದಯಾತ್ರೆಯ ಮೂಲಕ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು.
ನಾವು ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆ ಗೆಲ್ಲಲೇಬೇಕೆಂಬ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ. ಮೇಲ್ಮನೆಯ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಇಂಥ ಉತ್ತಮ ವ್ಯಕ್ತಿಗಳು ಗೆದ್ದು ಬರಬೇಕಿದೆ ಎಂದು ತಿಳಿಸಿದರು. ಇವರೆಲ್ಲ ಗೆಲ್ಲಲೇಬೇಕೆಂಬ ಸಂಕಲ್ಪದೊಂದಿಗೆ ಕೆಲಸ ಮಾಡುತ್ತೇವೆ ಎಂದು ಅವರು ವಿವರಿಸಿದರು.
ಎ.ಪಿ.ರಂಗನಾಥ್ ಮತ್ತು ಕೆ.ಎಂ. ಸುರೇಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮೋಶಿ ಮತ್ತು ಸಂಕನೂರು ಅವರೂ ನಾಳೆ ನಾಮಪತ್ರ ಸಲ್ಲಿಸುತ್ತಾರೆ. 4 ಕ್ಷೇತ್ರಗಳಲ್ಲೂ ನಮ್ಮ ಎನ್‍ಡಿಎ ಅಭ್ಯರ್ಥಿಗಳು ಗೆದ್ದೇಗೆಲ್ಲುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ತಿಳಿಸಿದರು.
ಶಿಕ್ಷಕರಿಗೆ ಬೆದರಿಕೆ ಹಾಕಿ ಅಧಿಕಾರ ದುರುಪಯೋಗ: ಸಿಎಂ ಡಿಕೆಶಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.