ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯಸಭೆ ಚುನಾವಣೆ; ಕಾಂಗ್ರೆಸ್‌ನ ಪವನ್ ಖೇರಾ, ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಜೂ.18ರಂದು ಚುನಾವಣೆ ನಡೆಯಲಿದ್ದು, ಅಂದೇ ಮತದಾನವಾಗಿ ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹಾಗೂ ಮನ್ಸೂರ್ ಅಲಿಖಾನ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ವಿಧಾನ ಪರಿಷತ್‌ ಚುನಾವಣೆಗೆ ಕೈ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ.

_Rajya Sabha elections (1)

ಇನ್ನು ಕಣದಲ್ಲಿರುವ ಪರಿಷತ್‌ ಅಭ್ಯರ್ಥಿಗಳಾದ ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಇನ್ನಷ್ಟೇ ನಾಮಪತ್ರ ಸಲ್ಲಿಸಬೇಕಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ಜೂ.18ರಂದು ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಅಂದೇ ಮತದಾನವಾಗಿ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ

ಕರ್ನಾಟಕದ ನಾಲ್ವರು ಸೇರಿ ವಿವಿಧ ರಾಜ್ಯಗಳ 24 ರಾಜ್ಯಸಭೆ ಸದಸ್ಯರ ಸ್ಥಾನಕ್ಕೆ ಜೂ.18ರಂದು ಚುನಾವಣೆ ನಿಗದಿಯಾಗಿದೆ. ಸದ್ಯ ಕರ್ನಾಟಕವನ್ನು ಪ್ರತಿನಿಧಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ. ನಾರಾಯಣ ಅವರ ರಾಜ್ಯಸಭೆಯ ಪ್ರಸಕ್ತ ಅವಧಿ ಇದೇ ಜೂನ್ 25 ರಂದು ಕೊನೆಗೊಳ್ಳಲಿದೆ.

ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾ ಬಲದ ಪ್ರಕಾರ ತೆರವಾಗುವ ನಾಲ್ಕು ಸ್ಥಾನಗಳಲ್ಲಿ 3 ಸ್ಥಾನಗಳು ಕಾಂಗ್ರೆಸ್‌ಗೆ ಸಿಗಲಿವೆ. ಬಿಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ. ಹೀಗಾಗಿ ದೇವೇಗೌಡ ಅವರು ಮತ್ತೊಂದು ಅವಧಿಗೆ ರಾಜ್ಯ ಸಭೆಗೆ ಪ್ರವೇಶ ಪಡೆಯುವರೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ; ರಾಹುಲ್‌ ಗಾಂಧಿ, ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್

93ರ ಇಳಿ ವಯಸ್ಸಿನ ದೇವೇಗೌಡರು ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಉತ್ಸುಕರಾಗಿದ್ದಾರೆ. ಆದರೆ, ಅವರ ಪಕ್ಷಕ್ಕೆ ಸಂಖ್ಯಾ ಬಲ ಇಲ್ಲದ ಕಾರಣ, ಬಿಜೆಪಿ ಸಹಾಯಹಸ್ತ ಚಾಚಿದರೆ ರಾಜ್ಯಸಭೆ ಪ್ರವೇಶಿಸಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ವರಿಷ್ಠರದ್ದಾಗಿದೆ.