ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ವಿವಿಗಳನ್ನೂ ಆದಾಯದ ಸರಕನ್ನಾಗಿ ನೋಡುತ್ತಿದೆ ಕಾಂಗ್ರೆಸ್ ಸರ್ಕಾರ; ಪ್ರಲ್ಹಾದ ಜೋಶಿ ಕಿಡಿ!

ಪದವೀಧರರಿಗೆ ಯುವ ನಿಧಿ ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಅಂಥ ಪದವೀಧರರನ್ನು ರೂಪಿಸುವ ವಿವಿಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯ ಸಚಿವ ಸಂಪುಟದ ಉಪ ಸಮಿತಿ ರಾಜ್ಯದಲ್ಲಿನ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕೈಗೊಂಡಿರುವ ತೀರ್ಮಾನಕ್ಕೆ ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಗಳನ್ನು ಮುಚ್ಚಲು ಹೊರಟಿರೋ ಕಾಂಗ್ರೆಸ್-ಜೋಶಿ ಆಕ್ರೋಶ!

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Profile Deekshith Nair Feb 16, 2025 11:01 AM

ಹುಬ್ಬಳ್ಳಿ: ಪದವೀಧರರಿಗೆ ಯುವ ನಿಧಿ ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ(Congress Government) ಈಗ ಅಂಥ ಪದವೀಧರರನ್ನು ರೂಪಿಸುವ ವಿವಿಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸಚಿವ ಸಂಪುಟದ ಉಪ ಸಮಿತಿ ರಾಜ್ಯದಲ್ಲಿನ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕೈಗೊಂಡಿರುವ ತೀರ್ಮಾನಕ್ಕೆ ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು 10 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ಅವನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿಯಿಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿನ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರಲ್ಹಾದ್‌ ಜೋಶಿ, ಶಿಕ್ಷಣ ಸರ್ವರ ಮೂಲಭೂತ ಹಕ್ಕು. ಆದರೆ ರಾಜ್ಯ ಸರ್ಕಾರ ಇದನ್ನು ಕಸಿದುಕೊಳ್ಳುತ್ತಿದೆ. ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ನೋಡುತ್ತಿದೆ. ಇದರಿಂದಾಗಿ ಶಿಕ್ಷಣದ ಮೂಲಭೂತ ಹಕ್ಕಿಗೆ ಕೊಡಲಿ ಪೆಟ್ಟು ಬೀಳುತ್ತಿದೆ ಎಂದು ಗುಡುಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಗಳನ್ನೂ ಆದಾಯದ ಮೂಲ ಮತ್ತು ಒಂದು ಸರಕನ್ನಾಗಿ ನೋಡುತ್ತಿರುವುದು ಖಂಡನೀಯ. ವಿವಿಗಳು ಆರ್ಥಿಕ ಮತ್ತು ಅಗತ್ಯ ಭೂಮಿಯ ಕೊರತೆ ಎದುರಿಸುತ್ತಿವೆ ಎಂಬ ಕುಂಟು ನೆಪವೊಡ್ಡುವ ಈ ಸರ್ಕಾರವೇ ಮೊದಲು ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಟೀಕಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Daali Weds Dhanyata: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಡಾಲಿ ; ವೈದ್ಯೆ ಧನ್ಯತಾರೊಂದಿಗೆ ನೆರವೇರಿತು ವಿವಾಹ

ಇನ್ನು, ಕಾಂಗ್ರೆಸ್ ಸರ್ಕಾರ ಕರ್ನಾಟಕ ಕರಾವಳಿ ಭದ್ರತೆಗೆ ಬೇಕಿರುವ ಅಗತ್ಯ ಇಂಧನವನ್ನು ಕಡಿತಗೊಳಿಸಿಸಲು ಆದೇಶಿಸಿದೆ. ಕರಾವಳಿ ಭದ್ರತೆಯ ವಿಚಾರದಲ್ಲಿ ಇಂಧನ ಕಡಿತಗೊಳಿಸಿರುವದು ಇವರ ಆಡಳಿತ ವೈಫಲ್ಯದ ನಿದರ್ಶನ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ವೇಳೆ ಜನರಿಗೆ ಅವೈಜ್ಞಾನಿಕ ರೀತಿಯ ಭರವಸೆಗಳನ್ನು ನೀಡಿ ಇತ್ತ ಅವನ್ನೂ ನೀಡಲಾಗದೆ, ಜನರಿಗೆ ಬೆಲೆ ಏರಿಕೆ ಬರೆ ಎಳೆದು ಹಿಂಸೆ ಮಾಡುತ್ತಿದೆ. ಆಡಳಿತದಲ್ಲಿ ಭ್ರಷ್ಟಾಚಾರದ ಪರಾಕಾಷ್ಟೆ ಮೀರಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ವ್ಯಾಪಕ ಭ್ರಷ್ಟಾಚಾರ, ನಾನಾ ಹಗರಣಗಳು, ಅವೈಜ್ಞಾನಿಕ ರೀತಿಯ ಘೋಷಣೆಗಳಿಂದಾಗಿ ರಾಜ್ಯವನ್ನು ಆರ್ಥಿವಾಗಿ ಮಾತ್ರವಲ್ಲದೆ, ಬೌದ್ಧಿಕವಾಗಿಯೂ ದಿವಾಳಿತನದತ್ತ ಕೊಂಡೊಯ್ಯುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.