Narendra Modi: ಕಾಂಗ್ರೆಸ್‌ನಿಂದ ಅಂಬೇಡ್ಕರ್‌ಗೆ ಅವಮಾನ: ಸದನದಲ್ಲಿ ಗುಡುಗಿದ ಮೋದಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ದ್ವೇಷಿಸುತ್ತಿತ್ತು. ನಿರಂತರವಾಗಿ ಅವರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಸದನದಲ್ಲಿ ಇಂದು (ಫೆ. 6) ಕಿಡಿಕಾರಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಂಬೇಡಕ್ಕರ್ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಗೆ ವಿರೋಧ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಆದರೆ ಇಂದು ಅವರು ಜೈ ಭೀಮ್ ಎಂದು ಹೇಳುವಂತೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್(BR Ambedkar) ಅವರನ್ನು ಕಾಂಗ್ರೆಸ್ ದ್ವೇಷಿಸುತ್ತಿತ್ತು. ನಿರಂತರವಾಗಿ ಅವರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ಮೋದಿ(Narendra Modi) ಅವರು ಸದನದಲ್ಲಿ ಇಂದು (ಫೆ. 6) ಕಿಡಿಕಾರಿದ್ದಾರೆ. ರಾಜ್ಯಸಭೆಯಲ್ಲಿ(Rajyasabha) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಗೆ ವಿರೋಧ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಸರ್ಕಾರ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಆದರೆ ಇಂದು ಅವರು ಜೈ ಭೀಮ್ ಎಂದು ಹೇಳುವಂತೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಸುದೀರ್ಘ ಭಾಷಣ ಮಾಡಿದ ನರೇಂದ್ರ ಮೋದಿ ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ಅನ್ನು ತಿವಿದಿದ್ದಾರೆ. ನೆಹರೂ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಅವರಿಗೆ ಸೂಕ್ತವಾದ ಗೌರವ ಮತ್ತು ಸ್ಥಾನಮಾನಗಳನ್ನು ಒದಗಿಸಿಲ್ಲ ಎಂದು ಹೇಳಿದ್ದಾರೆ.
"The Congress never considered Dr. B.R. Ambedkar worthy of the Bharat Ratna.
— Shobha Karandlaje (@ShobhaBJP) February 6, 2025
Today, they are compelled to say ‘Jai Bhim’ under pressure, yet they lack the conviction to say it with strength."
— Hon’ble Prime Minister Shri Narendra Modi Ji#PMModiinRajyaSabha pic.twitter.com/WnahSSeFIl
ಕಾಂಗ್ರೆಸ್ ಮಹಾನ್ ಸಾಧಕನಿಗೆ ಭಾರತ ರತ್ನವನ್ನೂ ನೀಡಲಿಲ್ಲ. 1990ರಲ್ಲಿ ಜನತಾದಳದ ವಿ.ಪಿ. ಸಿಂಗ್ ಪ್ರಧಾನಿಯಾಗಿದ್ದಾಗ ಅಂಬೇಡ್ಕರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಯಿತು. ಕಾಂಗ್ರೆಸ್ ಅಂಬೇಡ್ಕರ್‌ಗೆ ಮಾಡಿದ ಮೋಸದ ಪಟ್ಟಿಯೇ ಇದೆ. ಕಾಂಗ್ರೆಸ್‌ಗೆ ಬಿ.ಆರ್. ಅಂಬೇಡ್ಕರ್ ಬಗ್ಗೆ ದ್ವೇಷ, ಕೋಪವಿತ್ತು, ಲೋಕಸಭಾ ಚುನಾವಣೆಯಲ್ಲಿ ಅವರನ್ನು ಎರಡು ಬಾರಿ ಸೋಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಿತ್ತು ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Narendra Modi: ನೆಹರೂ ಸರ್ಕಾರ ದೇವಾನಂದ್, ಕಿಶೋರ್ ಅವರನ್ನು ಬ್ಯಾನ್ ಮಾಡಿತ್ತು: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮೋದಿ!
ಮುಂದುವರಿದು ಮಾತನಾಡಿರುವ ಮೋದಿ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ಗೇಲಿ ಮಾಡಿದ್ದಾರೆ. ಕಾಂಗ್ರೆಸ್ ತನ್ನ ನೀತಿಗಳಲ್ಲಿ ಕುಟುಂಬವೇ ಮೊದಲು ಎಂಬುದಕ್ಕೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದ್ದಾರೆ. ಬಿಜೆಪಿಯ ಗಮನ ರಾಷ್ಟ್ರ ಮೊದಲು ಎಂದು ಹೇಳಿದ ಪ್ರಧಾನಿ ಮೋದಿ, ಭಾರತದ ಜನರು ಬಿಜೆಪಿಯ ಅಭಿವೃದ್ಧಿ ಮಾದರಿಗೆ ಬಲವಾದ ಬೆಂಬಲವನ್ನು ನೀಡಿದ್ದಾರೆ. ಆದರೆ ಕಾಂಗ್ರೆಸ್ ಸುಳ್ಳು, ವಂಚನೆ, ಭ್ರಷ್ಟಾಚಾರ, ಸ್ವಜನಪಕ್ಷಪಾತದ ಮಿಶ್ರಣವಿರುವ ರಾಜಕೀಯದ ಮಾದರಿಯನ್ನು ಸೃಷ್ಟಿಸಿದೆ. ಕಾಂಗ್ರೆಸ್‌ಗೆ ಕುಟುಂಬ ರಾಜಕಾರಣವೇ ಮುಖ್ಯ. ಅಂಥವರಿಂದ ಸಬ್ಕಾ ವಿಕಾಸ್ ಸಾಧ್ಯವೇ ಇಲ್ಲ ಎಂದಿದ್ದಾರೆ.