ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Siddaramaiah: ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ ನೀಡಿದ ಕಾಂಗ್ರೆಸ್ ಹೈಕಮಾಂಡ್

ನವದೆಹಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿಯಾದ ಬಳಿಕ ಈ ತೀರ್ಮಾನ ಪ್ರಕಟವಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರಿಗೆ ಎಐಸಿಸಿಯಲ್ಲಿ ಸ್ಥಾನ ದೊರೆತಿದೆ.

ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಜತೆ ಸಿಎಂ ಸಿದ್ದರಾಮಯ್ಯ.

ನವದೆಹಲಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್ ಮಹತ್ವದ ಹುದ್ದೆಯನ್ನು ನೀಡಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯದ ಜನಪ್ರಿಯ ರಾಜಕಾರಣಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (congress working committee) ಸದಸ್ಯರಾಗಿ ನೇಮಕ ಮಾಡಲಾಗಿದೆ.

ಇಂದು ನವದೆಹಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿದ್ದರಾಮಯ್ಯ ಅವರು ಭೇಟಿಯಾದ ಬಳಿಕ ಈ ಮಹತ್ವದ ತೀರ್ಮಾನ ಪ್ರಕಟವಾಗಿದೆ. ಸಿದ್ದರಾಮಯ್ಯನವರನ್ನು ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ.

ಏನಿದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ?

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ ನೀತಿ ನಿರೂಪಣಾ ಮಂಡಳಿಯಾಗಿದ್ದು, ಪಕ್ಷದ ಪ್ರಮುಖ ರಾಜಕೀಯ ಕಾರ್ಯತಂತ್ರಗಳ ಅಂತಿಮ ನಿರ್ಧಾರ ಈ ಸಮಿತಿ ಸಭೆಯಲ್ಲಿ ಆಗಲಿದೆ. ಇದು ರಾಷ್ಟ್ರಮಟ್ಟದಲ್ಲಿ ಪಕ್ಷದ ನೀತಿ, ಸಂಘಟನೆ, ಪ್ರಚಾರದ ಕುರಿತು ಕೆಲಸ ಮಾಡಲಿದೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಮಹತ್ವದ ಸ್ಥಾನಮಾನ ಸಿಕ್ಕಂತಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸದಸ್ಯರಾಗುವುದರಿಂದ ಕೇವಲ ಪ್ರಾದೇಶಿಕ ನಾಯಕತ್ವ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ದೊಡ್ಡ ಮನ್ನಣೆ ಮತ್ತು ಪ್ರಭಾವ ಸಿಗುತ್ತದೆ.

CM oath ceremony: ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಸಂಪುಟ ರಚನೆ ಬಗ್ಗೆ ಹೈಕಮಾಂಡ್‌ ನಾಯಕರ ಜತೆ ಡಿಕೆಶಿ, ಸಿದ್ದರಾಮಯ್ಯ ಚರ್ಚೆ

ಬೆಂಗಳೂರಿನಲ್ಲಿ ಬುಧವಾರ ಪ್ರಮಾಣ ವಚನ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದ ಹೊಸ ಸಂಪುಟದ ರಚನೆ ಅಂತಿಮಗೊಳಿಸಲು ಕಾಂಗ್ರೆಸ್ ವರಿಷ್ಠರೊಂದಿಗೆ ಮಂಗಳವಾರ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಹಿರಿಯ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಅವರೊಂದಿಗಿನ ಸಭೆಯಲ್ಲಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭಾಗವಹಿಸಿದ್ದರು. ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವ ಸಂಪುಟಕ್ಕೆ ಅಂತಿಮ ರೂಪ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.