ನವದೆಹಲಿ: ಚಳಿಗಾಲದ ಅಧಿವೇಶನದ (Winter Session) ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಖುಷಿ ಪಡುತ್ತಿದ್ದ ಬಿಜೆಪಿಗೆ (BJP) ಸದನದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (Congress general secretary) ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ಈಗ ತಮ್ಮ ಪಕ್ಷವನ್ನು ಮುನ್ನಡೆಸುತ್ತಿರುವುದು ಸವಾಲಾಗಿ ಪರಿಣಮಿಸಿದೆ. ಜರ್ಮನಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರ ಅನುಪಸ್ಥಿತಿಯಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಲೋಕಸಭೆಯಲ್ಲಿ ತಮ್ಮ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿರುವುದಕ್ಕೆ ವಾರದ ಹಿಂದೆ ಬಿಜೆಪಿ ನಾಯಕರು ರಾಹುಲ್ ಗಾಂಧಿಯವರನ್ನು "ವಿದೇಶ ನಾಯಕ" ಎಂದು ವ್ಯಂಗ್ಯವಾಡಿದ್ದರು. ಆದರೆ ಇದೀಗ ವಿರೋಧ ಪಕ್ಷದ ನಾಯಕನ ಅನುಪಸ್ಥಿತಿಯಲ್ಲಿ ಬಿಜೆಪಿಗೆ ತೀವ್ರ ಎದುರಾಳಿಯನ್ನು ಎದುರಿಸುವಂತೆ ಮಾಡಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಗರೋತ್ತರ ಕಾಂಗ್ರೆಸ್‌ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಜರ್ಮನಿಗೆ ತೆರಳಿದ್ದು, ಇವರ ಅನುಪಸ್ಥಿತಿಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆಯಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.
ಸದನದಲ್ಲಿ ವಂದೇ ಮಾತರಂ, ಜಿ ರಾಮ್ ಜಿ ಮಸೂದೆ ವಿರುದ್ಧ ಸರ್ಕಾರವನ್ನು ಟೀಕಿಸಿರುವ ವಯನಾಡ್ ಸಂಸದೆ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬದಲಿಗೆ ಜಿ ರಾಮ್ ಜಿ ಮಸೂದೆ ಎಂದು ವಿಕಸಿತ್ ಭಾರತ್ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗೆ ಗ್ಯಾರಂಟಿ ಯೋಜನೆಯನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸದನದಲ್ಲಿ ಪರಿಚಯಿಸಿದ್ದು, ಇದರ ಬಗ್ಗೆ ಪ್ರಿಯಾಂಕಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
NPS Rules Relaxed: ರಾಷ್ಟ್ರೀಯ ಪಿಂಚಣಿ ಯೋಜನೆ ಇನ್ನಷ್ಟು ಸರಳ: ಏನೆಲ್ಲ ಸಡಿಲಿಕೆಗಳಿವೆ? ಇಲ್ಲಿದೆ ಮಾಹಿತಿ
ಇನ್ನು ಜಿ ರಾಮ್ ಜಿ ಮಸೂದೆ ವಿರುದ್ಧ ವಿರೋಧ ಪಕ್ಷಗಳು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಲೋಕಸಭೆಯ ಹೊರಗೆ ಪ್ರತಿಭಟನೆ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಮಹಾತ್ಮ ಗಾಂಧಿಯವರ ಛಾಯಾಚಿತ್ರವನ್ನು ಹಿಡಿದುಕೊಂಡು ಮಸೂದೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅವರು ಸಂಸತ್ತಿನ ಆವರಣದಲ್ಲಿ ಮೆರವಣಿಗೆ ನಡೆಸಿದರು.
ಇಷ್ಟು ಮಾತ್ರವಲ್ಲದೆ ಸದನದಲ್ಲಿ ಪ್ರಿಯಾಂಕಾ ಗಾಂಧಿಯವರ ತೀವ್ರ ಭಾಷಣದಲ್ಲಿ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ವಿರುದ್ಧದ ದೂರುಗಳ ಕುರಿತು ಚರ್ಚೆಯನ್ನು ಆಯೋಜಿಸುವಂತೆ ಬಿಜೆಪಿಗೆ ಸವಾಲು ಹಾಕಿದರು. ಇದು ಕಾಂಗ್ರೆಸ್ ವಿಮರ್ಶಕರಿಂದಲೂ ಪ್ರಶಂಸೆಗೆ ಪಾತ್ರವಾಗಿದೆ. ಸದನದಲ್ಲಿ ಅವರ ಅದ್ಭುತ ನಾಯಕತ್ವ ಪ್ರದರ್ಶನಕ್ಕೆ ಎಲ್ಲರಿಂದಲೂ ಮೆಚ್ಚುಗೆ ಹರಿದು ಬರುತ್ತಿದೆ.