ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಾಂಗ್ರೆಸ್ ನಾಯಕ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ!

Congress Leader Suraj Hegde: ಎಐಸಿಸಿ ಕಾರ್ಯದರ್ಶಿ ಹಾಗೂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ಹಠಾತ್ ಹೃದಯಘಾತದಿಂದ ನಿಧನರಾಗಿದ್ದಾರೆ. ಇವರು ಮಾಜಿ ಸಿಎಂ ದಿ. ದೇವರಾಜ ಅರಸು ಮೊಮ್ಮಗನಾಗಿದ್ದು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ರಾಗಿದ್ದರು..ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯ ಪ್ರವೇಶಿಸಿದ್ದ ಸೂರಜ್ ಹೆಗ್ಡೆ, ಅತ್ಯಂತ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದರು.

AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ -

Profile
Pushpa Kumari Jun 8, 2026 9:27 AM

ಬೆಂಗಳೂರು, ಜೂ.8: ಎಐಸಿಸಿ ಕಾರ್ಯದರ್ಶಿ ಹಾಗೂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ (Suraj Hegde) ಅವರು ಹಠಾತ್ ಹೃದಯಘಾತದಿಂದ ನಿಧನರಾಗಿದ್ದಾರೆ. ಇವರು ಮಾಜಿ ಸಿಎಂ ದಿ. ದೇವರಾಜ ಅರಸು ಮೊಮ್ಮಗ ನಾಗಿದ್ದು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ರಾಗಿದ್ದರು..ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯ ಪ್ರವೇಶಿಸಿದ್ದ ಸೂರಜ್ ಹೆಗ್ಡೆ, ಅತ್ಯಂತ ನಿಷ್ಠಾವಂತ ನಾಯಕರಾಗಿ ಗುರುತಿಸಿ ಕೊಂಡಿದ್ದರು. ಅವರ ಅಕಾಲಿಕ ನಿಧನಕ್ಕೆ ಹಲವು ಗಣ್ಯರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸೂರಜ್ (55) ಅವರಿಗೆ ಹಠಾತ್ ಹೃದಯ ಸಮಸ್ಯೆ ಕಾಣಿಸಿಕೊಂಡಿದ್ದು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ತಿಳಿದು ಬಂದಿದೆ. ಮೃತರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗ ನಾಗಿದ್ದು, ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಜ್ಯ ಗ್ಯಾರಂಟಿ ‌ಅನುಷ್ಠಾನ ಸಮಿತಿ ಉಪಾಧ್ಯಕ್ಷ ರಾಗಿದ್ದ ಸೂರಜ್ ಹೆಗ್ಡೆ ಅವರು ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಕೂಡ ಆಗಿದ್ದರು. ಇದೀಗ ಕಾಂಗ್ರೆಸ್​ ಪಕ್ಷವು ಪ್ರಬಲ ನಾಯಕನನ್ನು ಕಳೆದುಕೊಂಡಿದೆ.

CM DK Shivakumar: 2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಲು ಶಕ್ತಿ ತುಂಬಿ: ಕ್ಷೇತ್ರದ ಜನರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ನೋವಾಗಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ ವಾದದ್ದು.. ಕಾರ್ಯಕರ್ತರೊಂದಿಗೆ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಒಬ್ಬ ಸಕ್ರಿಯ ನಾಯಕನನ್ನು ಇಂದು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ .ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.