ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA A S Ponnanna: ಪ್ರಧಾನಿ ಮೋದಿ ಇಂಧನ ಮಿತವ್ಯಯ ಕರೆಗೆ ಕಾಂಗ್ರೆಸ್‌ ಶಾಸಕ ಪೊನ್ನಣ್ಣ ಸ್ಪಂದನೆ; ಬೆಂಗಾವಲು ವಾಹನ ಕಡಿತ

Fuel conservation: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌.ಪೊನ್ನಣ್ಣ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಮಗೆ ನೀಡಲಾಗಿರುವ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಲು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ಕೈ ಶಾಸಕ ಪೊನ್ನಣ್ಣ ಬೆಂಗಾವಲು ವಾಹನ ಕಡಿತ; ಪ್ರಧಾನಿ ಕರೆಗೆ ಸ್ಪಂದನೆ

ಕಾಂಗ್ರೆಸ್‌ ಶಾಸಕ ಎ.ಎಸ್‌.ಪೊನ್ನಣ್ಣ ಮತ್ತು ಪ್ರಧಾನಿ ನರೇಂದ್ರ ಮೋದಿ. -

Prabhakara R
Prabhakara R May 16, 2026 4:13 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತವ್ಯಯ ಸಲಹೆಯನ್ನು ಬಿಜೆಪಿ ನಾಯಕರು ಸೇರಿ ಹಲವು ಪ್ರಮುಖರು ಪಾಲಿಸಲು ಆರಂಭಿಸಿದ್ದಾರೆ. ಈ ನಡುವೆ ಪ್ರಧಾನಿಗಳ ಇಂಧನ ಉಳಿತಾಯದ ಕರೆಗೆ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಅವರು ಕೂಡ ಸ್ಪಂದಿಸಿದ್ದಾರೆ. ಈ ಮೂಲಕ ದೇಶ ಮೊದಲು, ನಂತರ ರಾಜಕೀಯ ಅನ್ನೋ ಸಂದೇಶ ಕೊಟ್ಟಿದ್ದಾರೆ. ಇವರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಮಗೆ ನೀಡಲಾಗಿರುವ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಲು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಪತ್ರ ಬರೆದಿದ್ದಾರೆ.

ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿರುವ ಪೊನ್ನಣ್ಣ ಅವರು, ಇಂಧನ ಉಳಿತಾಯ ಮತ್ತು ಸರ್ಕಾರಿ ವೆಚ್ಚ ಕಡಿತದ ಸಂದೇಶ ಸಾರುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ತೈಲ ಬಳಕೆ ಮಿತಿಗೊಳಿಸುವ ಅಗತ್ಯವಿದೆ ಎಂಬ ಸಂದೇಶವನ್ನು ತಮ್ಮ ಕ್ರಮದ ಮೂಲಕ ನೀಡಿರುವ ಪೊನ್ನಣ್ಣ ಅವರ ನಡೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

_A S Ponnanna (2)

ಕೊಡಗು ಎಸ್‌ಪಿಗೆ ಪತ್ರ

ನನ್ನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಭದ್ರತೆಗೆ ಬೆಂಗಾವಲು ಪಡೆಯನ್ನು ಒದಗಿಸಲಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕವಿದ್ದು ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಸಂಬಂಧ, ದೇಶದಲ್ಲಿ ನಿರ್ಮಾಣವಾಗಿರುವ ಆತಂಕದ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವ ಹಿನ್ನಲೆಯಲ್ಲಿ ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಳಿಗೆ ಶಾಸಕ ಎ.ಎಸ್ ಪೊನ್ನಣ್ಣ ಪತ್ರ ಬರೆದಿದ್ದಾರೆ.