ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಷ್ಟ್ರೀಯ ಅಧ್ಯಕ್ಷರಿಗೆ ಸಮಗ್ರ ವರದಿ ಸಲ್ಲಿಸುತ್ತೇವೆ ಎಂದ ವಿಜಯೇಂದ್ರ

BY Vijayendra: ಮೊದಲ ಹಂತದಲ್ಲಿ ಏನೇನು ಆಗಿದೆ ಎಂಬ ವರದಿಯನ್ನು ನಾವು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಿದ್ದೇವೆ. ಹಿರಿಯ ಮುಖಂಡ ಸಿ.ಟಿ. ರವಿ ಅವರ ನೇತೃತ್ವದಲ್ಲಿ ಒಂದು ಸತ್ಯಶೋಧನಾ ಸಮಿತಿಯನ್ನೂ ಮಾಡಿದ್ದೇವೆ. ಅವರೂ ನಮಗೆ ವರದಿ ಕೊಡಲಿದ್ದು, ಅದನ್ನು ಬಳಿಕ ರಾಷ್ಟ್ರೀಯ ಅಧ್ಯಕ್ಷರಿಗೆ ಕೊಡಲಿದ್ದೇವೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (ಸಂಗ್ರಹ ಚಿತ್ರ).

ನವದೆಹಲಿ, ಜೂ.23: ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಕೆಲವು ಶಾಸಕರು ಅಡ್ಡ ಮತದಾನ ಮಾಡಿ ವಿಪ್ ಉಲ್ಲಂಘಿಸಿದ ಕುರಿತು ಸಮಗ್ರ ವರದಿಯನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರಿಗೆ ಇಂದು ಸಲ್ಲಿಸುತ್ತೇವೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು, ಆರ್. ಅಶೋಕ್, ಚುನಾವಣಾ ಜವಾಬ್ದಾರಿ ಹೊತ್ತ ರವಿಕುಮಾರ್ ಅವರು ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಲಿದ್ದೇವೆ ಎಂದರು.

ಮೊದಲ ಹಂತದಲ್ಲಿ ಏನೇನು ಆಗಿದೆ ಎಂಬ ವರದಿಯನ್ನು ನಾವು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಿದ್ದೇವೆ. ಹಿರಿಯ ಮುಖಂಡ ಸಿ.ಟಿ. ರವಿ ಅವರ ನೇತೃತ್ವದಲ್ಲಿ ಒಂದು ಸತ್ಯಶೋಧನಾ ಸಮಿತಿಯನ್ನೂ ಮಾಡಿದ್ದೇವೆ. ಅವರೂ ನಮಗೆ ವರದಿ ಕೊಡಲಿದ್ದು, ಅದನ್ನು ಬಳಿಕ ರಾಷ್ಟ್ರೀಯ ಅಧ್ಯಕ್ಷರಿಗೆ ಕೊಡಲಿದ್ದೇವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಚುನಾವಣೆ ಆದ ಮರುದಿನ ನಾನೇ ರಾಷ್ಟ್ರೀಯ ಅಧ್ಯಕ್ಷರಿಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದೆ. ಆಗ ಕೆಲವು ಮಾಹಿತಿಗಳನ್ನು ಅವರೂ ಕೇಳಿದ್ದರು. ಆಗ ಭೇಟಿಗೆ ಸಮಯಾವಕಾಶ ಕೋರಿದ್ದು, ಇವತ್ತು ಬಂದಿದ್ದೇವೆ ಎಂದು ತಿಳಿಸಿದರು. ‌

ರಾಹುಲ್ ಗಾಂಧಿ ಜನರಿಂದ ಆಯ್ಕೆಯಾದ ನಾಯಕರಲ್ಲ: ಸಿ.ಟಿ. ರವಿ

ಧರ್ಮಸ್ಥಳ ಶ್ರೀ ಕ್ಷೇತ್ರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯುವುದು ಬೇಡ ಎಂಬ ಸಲಹೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಅಂತಿಮವಾಗಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಎಲ್ಲರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.