ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್‌ ಸ್ಪರ್ಧೆ: ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಫೋಟಕ ಭವಿಷ್ಯ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿಸೇರಿದ್ದಾಗ ಸ್ಫೋಟಕ ಭವಿಷ್ಯ ನುಡಿದಿದ್ದ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು, ಸದ್ಯ ದರ್ಶನ್‌ ರಾಜಕೀಯ ಜೀವನದ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ದರ್ಶನ್‌ ಜೈಲು ಸೇರಿದ್ದಾಗಲೂ ಇವರು ಜ್ಯೋತಿಷಿ ಭವಿಷ್ಯ ನುಡಿದು ಸುದ್ದಿಯಾಗಿದ್ದರು.

ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್‌ ಸ್ಪರ್ಧೆ: ಜ್ಯೋತಿಷಿ ಸ್ಫೋಟಕ ಭವಿಷ್ಯ

Profile Prabhakara R Mar 13, 2025 10:23 PM

ಬೆಂಗಳೂರು: ಚಿತ್ರರಂಗದವರು ರಾಜಕೀಯಕ್ಕೆ ಬರುವುದು ಹೊಸದೇನೂ ಅಲ್ಲ. ಈ ಹಿಂದೆ ಕೆಲ ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ಮಾಡಿದ್ದಾಗ ನಟ ದರ್ಶನ್‌ ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ದರ್ಶನ್ (Actor Darshan) ರಾಜಕೀಯದ ಬಗ್ಗೆ ಖ್ಯಾತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲಿಸೇರಿದ್ದಾಗ ಸ್ಫೋಟಕ ಭವಿಷ್ಯ ನುಡಿದಿದ್ದ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು, ಸದ್ಯ ದರ್ಶನ್‌ ರಾಜಕೀಯ ಜೀವನದ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ದರ್ಶನ್‌ ಬಂಧನವಾಗಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು, ನಟ ದರ್ಶನ್ ಈಗಾಗಲೇ ಜೈಲು ಸೇರಿ ಎರಡು ತಿಂಗಳಾಗಿದೆ. ಮುಂದಿನ 3 ತಿಂಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬರುತ್ತಾರೆ. ನಂತರ ಸಿನಿಮಾದಲ್ಲಿ ಭಾಗಿಯಾಗುತ್ತಾರೆ ಎಂದು ನುಡಿದಿದ್ದ ಭವಿಷ್ಯ ನುಡಿದಿದ್ದರು. ಇದೇ ವೇಳೆ ದರ್ಶನ್ 2027 ರಲ್ಲಿ ರಾಜಕೀಯ ಪ್ರವೇಶಿಸುತ್ತಾರೆ. ಅವರು ರಾಜಕೀಯದಲ್ಲಿ ಯಶಸ್ವಿಯಾಗುತ್ತಾರೆ. ಅವರು ತಮ್ಮ ಖ್ಯಾತಿಯನ್ನು ಮರಳಿ ಪಡೆಯುತ್ತಾರೆ ಎಂದು ಹೇಳಿದ್ದರು.



ಇದೀಗ ದರ್ಶನ್ ಅವರು ನಟಿ ಸುಮಲತಾ, ಅಭಿಷೇಕ್ ಅಂಬರೀಶ್ ಸೇರಿದಂತೆ ಎಲ್ಲರನ್ನೂ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅನ್‌ಫಾಲೋ ಮಾಡಿದ ಹಿನ್ನೆಲೆಯಲ್ಲಿ ಸುಮಲತಾ ಅವರಿಂದ ದರ್ಶನ್ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಜ್ಯೋತಿಷಿ ಪ್ರಶಾಂತ್ ಕಿಣಿ ಮತ್ತೊಮ್ಮೆ ನಟ ದರ್ಶನ್ ಬಗ್ಗೆ ಭವಿಷ್ಯ ಹೇಳಿದ್ದಾರೆ.

ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದ್ದಕ್ಕಾಗಿ ಚಾಲೆಂಜಿಂಗ್ ದರ್ಶನ್ ಸಂಕಷ್ಟಕ್ಕೆ ಸಿಲುಕಿದರು. ದರ್ಶನ್ ಸೇರಿ ಪ್ರಜ್ವಲ್ ರೇವಣ್ಣ ಕೂಡ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಆದರೆ, ಯಶ್ ಮಾತ್ರ ಸಂಕಷ್ಟಕ್ಕೆ ಸಿಲುಕಲಿಲ್ಲ. ದರ್ಶನ್ ಕಾರಣದಿಂದಾಗಿಯೇ ನಟಿ ಸುಮಲತಾ ಮಂಡ್ಯದಲ್ಲಿ ಗೆದ್ದರು. ಆದರೆ, ಇದೀಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ನಂತರ ಸುಮಲತಾ ದರ್ಶನ್ ಅವರನ್ನು ಕೈಬಿಟ್ಟರು. ಈಗ ದರ್ಶನ್ ಮಂಡ್ಯದಲ್ಲಿ ಮಾತ್ರ ಸುಮಲತಾ ಅವರನ್ನು ಚುನಾವಣೆಯಲ್ಲಿ ಎದುರಿಸಲಿದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ.

ನಟಿ ಸುಮಲತಾ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಮಹತ್ವದ ಪಾತ್ರವಹಿಸಿದ್ದ ನಟ ದರ್ಶನ್ ಅವರು ಜೈಲಿನಿಂದ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಸುಮಲತಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ದರ್ಶನ್ ಅವರು ಸುಮಲತಾ ವಿರುದ್ಧವೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ.