ದಾವಣಗೆರೆ, ಏ.1: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಭಾಗವಾಗಿ (Davanagere South byelection) ಆರ್ಯ ವೈಶ್ಯ ಸಂಘ ಸಂಸ್ಥೆಗಳ ಸಮೂಹವು ಆಯೋಜಿಸಿದ್ದ ʼಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನʼ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಈ ವೇಳೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಪರವಾಗಿ ಮತಯಾಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ್, ಮಾಜಿ ಸಚಿವ ಮತ್ತು ಶಾಸಕ ಸಿ.ಸಿ. ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಮುಖಂಡರಾದ ಯಶವಂತ ರಾವ್ ಜಾಧವ್, ಅಜಯ್ ಕುಮಾರ್, ಶಿವಕುಮಾರ್, ವಿಜೇಂದ್ರ ಡಿ.ಟಿ., ವೀರೇಶ್, ಶಿವಪ್ರಕಾಶ, ನಾಗಪ್ರಕಾಶ್ ಹಾಗೂ ಸಮಾಜದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ
ದಾವಣಗೆರೆ: ರಾಜ್ಯದಲ್ಲಿ ಒಂದು ರೀತಿಯಲ್ಲಿ ಟ್ಯಾಕ್ಸ್ ಟೆರರಿಸಂ (tax terrorism) ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದರು. ನಂತರ ಹಾಲಿನ ದರ, ಎರಡು ಬಾರಿ ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ ಮಾಡಿದ್ದಾರೆ. ಮೂರು ವರ್ಷದಲ್ಲಿ 60 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದರು.
ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಸುಮಾರು 5 ಲಕ್ಷ ಕೋಟಿ ಹೊಸ ಸಾಲ ಮಾಡಿ, ದಾಖಲೆ ಸಾಲಗಾರ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಯಾವುದೇ ಹಳ್ಳಿಯಲ್ಲಿ ನೋಂದಣಿ ಮಾಡಬೇಕೆಂದರೆ ಲಂಚದ ಹಣ ಬೆಂಗಳೂರಿಗೆ ಮುಟ್ಟಬೇಕು. ಇಲ್ಲದಿದ್ದರೆ ನೋಂದಣಿ ಆಗುವುದಿಲ್ಲ.
ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ
ದೂರದ ಹಳ್ಳಿಯಲ್ಲಿ ಒಂದು ಎಕರೆ ಚೇಂಜ್ ಆಫ್ ಲ್ಯಾಂಡ್‌ಗೆ 10 ಲಕ್ಷ ರೂ. ನಿಗದಿ ಮಾಡಿದ್ದಾರೆ. ಇವರು ಕೊಡುವಂತಹ ಅಕ್ಕಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ರೇಷನ್ ಅಂಗಡಿಯವರೂ ದೂರು ದಾಖಲಿಸಿದ್ದಾರೆ. ಪ್ರತಿ ತಿಂಗಳು ಎಷ್ಟು ಕಡಿಮೆ ಅಕ್ಕಿ ಹಂಚಿಕೆ ಮಾಡುತ್ತೇವೆ ಅಷ್ಟು ರಾಜ್ಯ ಸರ್ಕಾರಕ್ಕೆ ಅನುಕೂಲ ಆಗುತ್ತದೆ ಎನ್ನುತ್ತಾರೆ. ಆಸ್ಪತ್ರೆಯಲ್ಲಿ, ಮಂತ್ರಿಗಳ ಕಚೇರಿ, ಸಿಎಂ ಕಚೇರಿಯಿಂದಲೇ ಭ್ರಷ್ಟಾಚಾರ ಆರಂಭವಾಗುತ್ತದೆ. ವರ್ಗಾವಣೆ ಉದ್ಯಮವಾಗಿ ಮಾರ್ಪಾಡಾಗಿದೆ. ಯಾವುದೇ ಅಧಿಕಾರಿ ಎಷ್ಟೇ ದುಡ್ಡು ಕೊಟ್ಟು ಬಂದರೂ ಎಷ್ಟು ದಿನ ಇರುತ್ತಾನೆ ಎನ್ನುವ ನಂಬಿಕೆ ಇಲ್ಲ. ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಾರೆ ಎಂದು ಅವರು ಆರೋಪಿಸಿದರು.