ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಜಯನಗರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಭೇಟಿ; ಸಂಕಷ್ಟದಲ್ಲಿರುವ ಜನರಿಗೆ ತ್ವರಿತ ನೆರವು ನೀಡಲು ಅಧಿಕಾರಿಗಳಿಗೆ ಸೂಚನೆ

Dr G Parameshwara: ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಕುಡಿಯುವ ನೀರು, ಮೇವು, ಉದ್ಯೋಗ ಹಾಗೂ ರೈತರ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ, ಸಂಕಷ್ಟದಲ್ಲಿರುವ ಜನರೊಂದಿಗೆ ನಮ್ಮ ಸರ್ಕಾರ ಸದಾ ನಿಲ್ಲಲಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ ಭರವಸೆ ನೀಡಿದ್ದಾರೆ.

ವಿಜಯನಗರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಭೇಟಿ

-

Profile
Siddalinga Swamy Oct 15, 2026 7:28 PM

ಹೊಸಪೇಟೆ, ಅ.15: ಬರ ಪರಿಸ್ಥಿತಿ ಎದುರಾದ ದಿನದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ (Vijayanagara News) ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ, ಬರದಿಂದ ಜನಜೀವನದ ಮೇಲೆ ಉಂಟಾಗಿರುವ ಪರಿಣಾಮಗಳನ್ನು ಪರಿಶೀಲಿಸಿದ್ದೇನೆ. ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ನೆರವು ತ್ವರಿತವಾಗಿ ತಲುಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ (Dr G Parameshwara) ತಿಳಿಸಿದರು.

ಜಿಲ್ಲೆಯ ಎಲ್ಲ 6 ತಾಲೂಕುಗಳು ಬರಪೀಡಿತ

ವಿಜಯನಗರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ವೇಳೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಶೇ.57ರಷ್ಟು ಮಳೆ ಕೊರತೆಯಾಗಿದ್ದು, ಹೊಸಪೇಟೆ, ಹಡಗಲಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕುಗಳು ತೀವ್ರ ಹಾನಿಗೊಳಗಾಗಿವೆ. 2,71,094 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಕೃಷಿ ಬೆಳೆಗಳು ಹಾಗೂ 6,123 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ, ಟೊಮೆಟೊ ಮತ್ತು ಮೆಣಸಿನಕಾಯಿ ಬೆಳೆಗಳು ಹಾನಿಗೊಳಗಾಗಿವೆ. 32 ಗ್ರಾಮಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪೂರ್ಣಗೊಳಿಸಿ, ಜಿಲ್ಲೆಯ ಎಲ್ಲ 6 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ ಎಂದರು.

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ, 'ಜನರ ಯೋಜನೆ' ಜಾರಿಗೆ ಮಾರ್ಗಸೂಚಿ: ಸಿಎಂ

ಜಿಲ್ಲೆಯಲ್ಲಿ 3,45,287 ರೈತರು ಬೆಳೆಹಾನಿಗೆ ಒಳಗಾಗಿದ್ದು, 1,65,359 ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 4,38,405 ಕೃಷಿ ಪ್ಲಾಟ್‌ಗಳ ಪೈಕಿ 3,31,587 ಪ್ಲಾಟ್‌ಗಳನ್ನು FRUITS ಪೋರ್ಟಲ್‌ಗೆ ಸೇರ್ಪಡೆ ಮಾಡಲಾಗಿದೆ. ಉಳಿದ ಮಾಹಿತಿಯನ್ನು ತಕ್ಷಣ ನವೀಕರಿಸಿ ರೈತರಿಗೆ ನೆರವು ತಲುಪಿಸುವಂತೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಉಳುಮೆಯ ವೆಚ್ಚ ಸರ್ಕಾರವೇ ಭರಿಸುತ್ತಿದೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರದಿಂದ ತಲಾ ₹2,500 ಪರಿಹಾರ ಒದಗಿಸಲಾಗುತ್ತಿದೆ. ಸಣ್ಣ, ಅತಿಸಣ್ಣ ರೈತರ ಹಿತ ಕಾಯುವ ದೃಷ್ಟಿಯಿಂದ ನೇಗಿಲ ಯೋಗಿ ಯೋಜನೆಯನ್ನು ಪರಿಚಯಿಸಿ ಉಳುಮೆಯ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ ಎಂದು ಹೇಳಿದರು.

ಜಿಲ್ಲೆಯ 38 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗುರುತಿಸಲಾಗಿದ್ದು, ನೀರು ಪೂರೈಕೆಗಾಗಿ 46 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಕುಡಿಯುವ ನೀರಿನ ನಿರ್ವಹಣೆಗೆ ಟಾಸ್ಕ್‌ಫೋರ್ಸ್ ಅಡಿಯಲ್ಲಿ ₹4 ಕೋಟಿ ಬಿಡುಗಡೆ ಮಾಡಲಾಗಿದೆ. ₹2.86 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 106 ಕಾಮಗಾರಿಗಳ ಪೈಕಿ 80 ಪೂರ್ಣಗೊಂಡಿದ್ದು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದ್ದೇನೆ. ಎರಡನೇ ಕಂತಿನಲ್ಲಿ ಕ್ಷೇತ್ರವಾರು ₹5 ಕೋಟಿ ಒದಗಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಂದಿನ 41 ವಾರಗಳಿಗೆ ಸಾಕಾಗುವಷ್ಟು 6,24,204 ಟನ್ ಮೇವು ಲಭ್ಯವಿದೆ. ಮಾರುಕಟ್ಟೆಯಲ್ಲಿ ಪ್ರತಿ ಟನ್ ಮೇವಿನ ದರ 10 ರಿಂದ 12 ಸಾವಿರ ಇದ್ದು, ರೈತರಿಗೆ ಹೊರೆಯಾಗದಂತೆ ₹7,000 ದರ ನಿಗದಿಪಡಿಸಲಾಗಿದೆ. ನೀರಾವರಿ ಸೌಲಭ್ಯವಿರುವ ರೈತರಿಗೆ 16,623 ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗಿದ್ದು, 1,400 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಮೂಲಕ ಸುಮಾರು 45,000 ಟನ್ ಹಸಿರು ಮೇವು ಉತ್ಪಾದನೆಯ ನಿರೀಕ್ಷೆಯಿದೆ.

ಜಿಲ್ಲೆಯ 3.4 ಲಕ್ಷ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ

ಬರದಿಂದ ಗ್ರಾಮೀಣ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಡೆಯಲು ನರೇಗಾ ಯೋಜನೆಯಡಿ 27.74 ಲಕ್ಷ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದ್ದು, ಜಿಲ್ಲೆಯ 3.4 ಲಕ್ಷ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಬರಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ರಸ್ತೆ ಸುರಕ್ಷತೆಗೆ ಆದ್ಯತೆ: ಬೆಂಗಳೂರಿನಲ್ಲಿ ಟ್ರಾಫಿಕ್‌ ಪಾರ್ಕ್‌ ಸ್ಥಾಪನೆಗೆ ಸಚಿವ ಪ್ರಿಯಾಂಕ್ ಖರ್ಗೆ ಶಿಲಾನ್ಯಾಸ

ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಕುಡಿಯುವ ನೀರು, ಮೇವು, ಉದ್ಯೋಗ ಹಾಗೂ ರೈತರ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ, ಸಂಕಷ್ಟದಲ್ಲಿರುವ ಜನರೊಂದಿಗೆ ನಮ್ಮ ಸರ್ಕಾರ ಸದಾ ನಿಲ್ಲಲಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ ಭರವಸೆ ನೀಡಿದರು.