ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ದೆಹಲಿಯಲ್ಲಿ ಸಂಸದರ ಜತೆ ಚರ್ಚೆ: ಡಿ.ಕೆ. ಶಿವಕುಮಾರ್

DK Shivakumar: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಎಚ್.ಕೆ. ಪಾಟೀಲ್ ಹಾಗೂ ಎಂ.ಬಿ. ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನೀರಾವರಿ ಯೋಜನೆಗಳ ಬಗ್ಗೆ ದೆಹಲಿಯಲ್ಲಿ ಸಂಸದರ ಜತೆ ಚರ್ಚೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Mar 17, 2026 2:01 PM

ಬೆಂಗಳೂರು, ಮಾ.17: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ (Central Government) ಅನುಮತಿ ಬಾಕಿ ಉಳಿಸಿಕೊಂಡಿದೆ, ಆದ ಕಾರಣ ನಾನು, ಎಚ್.ಕೆ. ಪಾಟೀಲ್ (HK Patil) ಹಾಗೂ ಎಂ.ಬಿ. ಪಾಟೀಲ್ (MB Patil) ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ; ರೈತರಿಗೆ ಶೀಘ್ರವೇ ಪರಿಹಾರ ನೀಡುತ್ತೇವೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರದ ಬಗ್ಗೆ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರವನ್ನು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ವಿಧಾನಸಭೆಯ ಗಮನ ಸೆಳೆವ ಸೂಚನೆ ಮೇಲೆ ನಡೆದ ಚರ್ಚೆ ವೇಳೆ ಶಾಸಕ ಸಿ.ಎಸ್. ಬಾಲಕೃಷ್ಣ, ಚನ್ನರಾಯಪಟ್ಟಣ ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಭೂಸ್ವಾಧೀನ ಪರಿಹಾರ ನೀಡದಿರುವುದರಿಂದ ಕಾಮಗಾರಿ ಪ್ರಕ್ರಿಯೆಗೆ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ; 14,525 ಉದ್ಯೋಗ ಸೃಷ್ಟಿ ನಿರೀಕ್ಷೆ

ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ʼಈ ಯೋಜನೆಯಲ್ಲಿ ಪಂಪ್, ಮೋಟಾರ್ ಎಲ್ಲವನ್ನು ಅಳವಡಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಸ್ವಾಧೀನಗೊಂಡ ಭೂಮಿಗೆ ಪರಿಹಾರ ಬಾಕಿ ಇದೆ ಎಂದು ಕಾಣುತ್ತದೆ. ಈ ಬಗ್ಗೆ ನಾನು ಪರಿಶೀಲನೆ ಮಾಡಿಸಿ ಹಣ ನೀಡಲಾಗುವುದು ಎಂದು ಹೇಳಿದರು.

ಕೆಲಸ ಮಾಡಲು ಅವಕಾಶ ಕೊಟ್ಟ ರೈತರು ನೀರನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿಲ್ಲ ಯಾಕೆ? ಎಂದ ಅವರು, 100 ಮೀಟರ್ ಕೆಲಸ ಬಾಕಿ ಇದೆಯೋ, 500 ಮೀಟರ್ ಕೆಲಸ ಬಾಕಿ ಇದೆಯೋ? ಆಕ್ಷೇಪ ವ್ಯಕ್ತಪಡಿಸುತ್ತಿರುವ ರೈತರ ಮನವೊಲಿಸಿ ಕೆಲಸ ಪೂರ್ಣಗೊಳಿಸಲು ಅವಕಾಶ ಕೊಡಿಸಿ. ಇಲ್ಲವಾದರೆ ಇದುವರೆಗೂ ಆಗಿರುವ ಕೆಲಸಗಳು ವ್ಯರ್ಥವಾಗುವುದಿಲ್ಲವೇ?, ಕಾಮಗಾರಿ ಮಾಡಿ ಭೂಮಿಯಲ್ಲಿ ಪೈಪ್‌ಗಳನ್ನು ಅಳವಡಿಸಿದ ಮೇಲೆ ಆ ಭೂ ಮಾಲೀಕರಿಗೆ ಪರಿಹಾರ ನೀಡಲೇಬೇಕು, ಆ ಕೆಲಸ ನಾವು ಮಾಡುತ್ತೇವೆ. ನೀವು ರೈತರಿಗೆ ಮನವೊಲಿಸಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಸಹಕರಿಸಿ, ನೀವೇ ಉದ್ಘಾಟನೆ ಮಾಡಿ. ನಂತರ ನಾನು ಬಂದು ಉದ್ಘಾಟನೆ ಮಾಡುವೆʼ ಎಂದು ಹೇಳಿದರು.