ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದ ಹಿನ್ನೆಲೆ ಎಲ್‌ಪಿಜಿ ಕೊರತೆ; ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
DK Shivakumar: ದೇಶದ ವಿದೇಶಾಂಗ ನೀತಿ ಹಳ್ಳಹಿಡಿದಿದೆ. ಸರ್ಕಾರ ಇದರ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಬೇಕು. ಸಂಸದರು ಸಹ ಇದರ ಬಗ್ಗೆ ಮಾತನಾಡಬೇಕು. ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಅವರು ಹೋಟೆಲ್‌ಗಳನ್ನು ಮುಚ್ಚಲು ತೀರ್ಮಾನ ಮಾಡಿದ್ದಾರೆ. ಇದರಿಂದ ಆಸ್ಪತ್ರೆಗಳಿಗೂ ಹೊಡೆತ ಬೀಳಲಿದೆ. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -
ಬೆಂಗಳೂರು, ಮಾ.10: ಅನಿಲ ಸಿಲಿಂಡರ್‌ಗಳು (LPG Cylinder) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದ್ದು, ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ದೇಶದ ವಿದೇಶಾಂಗ ನೀತಿ ಹಳ್ಳಹಿಡಿದಿದೆ. ಸರ್ಕಾರ ಇದರ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಬೇಕು. ಸಂಸದರು ಸಹ ಇದರ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಅವರು ಹೋಟೆಲ್‌ಗಳನ್ನು ಮುಚ್ಚಲು ತೀರ್ಮಾನ ಮಾಡಿದ್ದಾರೆ. ಇದರಿಂದ ಆಸ್ಪತ್ರೆಗಳಿಗೂ ಹೊಡೆತ ಬೀಳಲಿದೆ. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಪರ್ಯಾಯ ಹಾಗೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕೇಂದ್ರ
ಮನೆ ಬಳಕೆಗೆ, ಉದ್ದಿಮೆಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕು. ಕಳೆದ 15 ದಿನಗಳಿಂದಲೂ ಈ ವಿಚಾರವಾಗಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಿಲ್ಲ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಬಗ್ಗೆ ಕೇಳಿದಾಗ, ʼಸೋನಿಯಾ ಗಾಂಧಿ ಅವರು ನನ್ನನ್ನು ಅಂದು ಆಯ್ಕೆ ಮಾಡಿದರು. ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ವಿಧಾನಸಭೆ ಕಲಾಪ ನಡೆಯುತ್ತಿರುವ ಕಾರಣಕ್ಕೆ ದೊಡ್ಡ ಸಮಾರಂಭ ಮಾಡುವುದನ್ನು ಮುಂದೂಡಲಾಯಿತು. ಇಂದು ಸಂಜೆ ಎಲ್ಲಾ ಶಾಸಕರಿಗೆ ಔತಣಕೂಟ ಏರ್ಪಡಿಸಲಾಗಿದೆʼ ಎಂದು ಹೇಳಿದರು.
ದೇವೇಗೌಡರ ಮನಸ್ಸು ನೋಯಿಸಲು ಇಷ್ಟವಿಲ್ಲ: ಡಿ.ಕೆ. ಶಿವಕುಮಾರ್ ಹೀಗ್ಯಾಕೆ ಅಂದ್ರು?
ನೀವು ಮುಖ್ಯಮಂತ್ರಿ ಆಗಬೇಕು ಎನ್ನುವ ಒತ್ತಾಯದ ಬಗ್ಗೆ ಕೇಳಿದಾಗ, ʼಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪಕ್ಷ ನೀಡಿದ ಕರ್ತವ್ಯ, ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.